ಕಾಪು ವಿಧಾನ ಸಭಾ ಕ್ಷೇತ್ರದ ಅಭಿವ್ರದ್ದಿ ಕೆಲಸಗಳು ರಾಜ್ಯಕ್ಕೇ ಮಾದರಿ: ಈಶ್ವರ ಖಂಡ್ರೆ
ಉಡುಪಿ: ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿರುವ ಅಭಿವ್ರದ್ಧಿಯ ಕಾಮಗಾರಿಗಳು ರಾಜ್ಯಕ್ಕೆ ಮಾದರಿಯಾಗಿದ್ದು, ನನ್ನ ಕ್ಷೇತ್ರದಲ್ಲೂ ಇದೇ ಮಾದರಿಯನ್ನು ಅನುಸರಿಸಿಕೊಂಡು ಅಭಿವ್ರದ್ಧಿಯನ್ನು ಮಾಡುವುದಾಗಿ ಪೌರಾಡಾಳಿತ ಸಚಿವ ಈಶ್ವರ ಖಂಡ್ರೆ ಹೇಳಿದರು.
ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾಪು ವಿಧಾನ ಸಭಾ ವ್ಯಾಪ್ತಿಯ ವಿವಿಧ ಅಭಿವ್ರದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವನ್ನು ನೆರವೇರಿಸಿ ಅವರು ಮಾತನಾಡಿದರು.
ಯೋಜನಾಬದ್ಧವಾಗಿ ನಗರಗಳು ಬೆಳೆಯಬೇಕಾದರೆ ಕಸವಿಲೇವಾರಿ ಸಮಸ್ಯೆ ಗೆ ಪರಿಹಾರ ಕಾಣುವುದರ ಜೊತೆಗೆ ಮತ್ತು ರಾಜ್ಯವನ್ನು ಬಹಿರ್ದೆಸೆ ಮುಕ್ತ ವಾಗಿ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತಾನಾಡಿದ ಮಾಜಿ ಸಚಿವ ಕಾಪು ಶಾಸಕ ವಿನಯ ಕುಮಾರ್ ಸೊರಕೆ ಮಾತನಾಡಿ ಕಾಪು ಪಟ್ಟಣ ಮತ್ತು ಗ್ರಾಮಗಳು ಶರವೇಗದಲ್ಲಿ ಅಭಿವ್ರದ್ದಿ ಹೊಂದುವಂತೆ ಬಹಳಷ್ಟು ಅಭಿವ್ರದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳ ಲಾಗಿದೆ. ಇನ್ನು ಮುಂದೆಯೂ ಕೂಡಾ ಕಾಪು ಕ್ಷೇತ್ರದ ಅಭಿವ್ರದ್ಧಿ ಕೆಲಸಗಳು ಶರವೇಗದಲ್ಲಿ ಮುಂದುವರಿಯುತ್ತದೆ ಎಂದು ತಿಳಿಸಿದ್ರು.
ಇದೇ ಸಂದರ್ಭ ಕಾಪು ಪುರಸಭಾ ವ್ಯಾಪ್ತಿಯ ಜನತೆಗೆ ಹಕ್ಕುಪತ್ರಗಳನ್ನು ಮತ್ತು ಯುವಜನ ಸೇವಾ ಕ್ರೀಡಾ ಇಲಾಖೆ ವತಿಯಿಂದ ವಿವಿಧ ಸಂಘ ಸಂಸ್ಥೆಗೆ ಕ್ರೀಡಾ ಕಿಟ್ ಗಳನ್ನು ವಿತರಿಸಲಾಯಿತು.
ಜಿ. ಪಂ ಸದಸ್ಯ ವಿಲ್ಸನ್ ರೊಡ್ರಿಗಸ್, ಪುರಸಭಾ ಆಧ್ಯಕ್ಷೆ ಮಾಲಿನಿ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು, ಪುರಸಭೆ ಮುಖ್ಯಾಧಿಕಾರಿ ರಾಯಪ್ಪ, ಪಂಚಾಯತ್ ಅಭಿವ್ರದ್ಧಿ ಅಧಿಕಾರಿ ಅರುಣ್ ಕುಮಾರ್, ದಮಯಂತಿ ಅಮೀನ್, ಶಾಂತಲತಾ, ಡೇವಿಡ್ ಡಿಸೋಜ, ಪ್ರಶಾಂತ್ ಜತ್ತನ್ನ, ಜಿತೇಂದ್ರ ಪುಟಾರ್ಡೋ ಮೊದಲಾದವರು ಉಪಸ್ಥಿತರಿದ್ದರು
ಕಾಪು ದಿವಾಕರ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಕುದಿ ವಸಂತ ಶೆಟ್ಟಿ ಕಾರ್ಯಕ್ರಮನಿರೂಪಿಸಿದರು.
ಸಭಾ ಕಾರ್ಯಕ್ರಮಕ್ಕೂ ಮುನ್ನಾ ಕಾಪು ವಿಧಾನಸಭಾ ವ್ಯಾಪ್ತಿಯ ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವ್ರದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ಮಾಜಿ ಸಚಿವ ಕಾಪು ಶಾಸಕ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಪುರಸಭಾ ವ್ಯಾಪ್ತಿಯ ಸುಮಾರು 8 ಅಭಿವ್ರದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಕಾಪು ಪುರಸಭಾ ವ್ಯಾಪ್ತಿಯ ಸುಮಾರು 130 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು 850 ಲಕ್ಚ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಪುರಸಭಾ ವ್ಯಾಪ್ತಿಯ ಡಾ. ಪ್ರಭಾಕರ ಶೆಟ್ಟಿ ಮನೆಯಿಂದ ಪಕೀರನಕಟ್ಟೆ ರಸ್ತೆ ಅಭಿವ್ರದ್ಧಿ, ಮಲ್ಲಾರ್ ಕೋಟೆ ರಸ್ತೆ ಅಭಿವ್ರದ್ದಿ, ಪಕೀರನಕಟ್ಟೆ ಸ್ಮಶಾನ ಅಭಿವ್ರದ್ಧಿಯ ಉದ್ಘಾಟನೆ, ಕಾಪು ಮೀನು ಮಾರುಕಟ್ಟೆ ಅಭಿವ್ರದ್ಧಿಗೆ ಶಿಲಾನ್ಯಾಸ, ಪಡುಗ್ರಾಮದ ಮಮ್ಮುಕೆರೆ ಅಭಿವ್ರದ್ಧಿ ಯ ಉದ್ಘಾಟನೆ, ಭಟ್ರತೋಟ ಸೇತುವೆ ಅಭಿವ್ರದ್ಧಿ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಾಯಿತು.