ಕಾಫಿ ಡೇ ಮಾಲೀಕ ಸಿದ್ಧಾರ್ಥ್ ನಿಧನಕ್ಕೆ  ಶಾಸಕ ಕಾಮತ್ ಸಂತಾಪ ಸಂತಾಪ 

Spread the love

ಕಾಫಿ ಡೇ ಮಾಲೀಕ ಸಿದ್ಧಾರ್ಥ್ ನಿಧನಕ್ಕೆ  ಶಾಸಕ ಕಾಮತ್ ಸಂತಾಪ ಸಂತಾಪ 

ಮಂಗಳೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವಿಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ಸಂತಾಪ ಸೂಚಿಸಿದ್ದಾರೆ.

ಸಿದ್ಧಾರ್ಥ್ ಸಾವು ಹಿನ್ನಲೆ ಸಂತಾಪ ಸೂಚಿಸಿರುವ ವೇದವ್ಯಾಸ್ ಕಾಮತ್ ಅವರು, ಮಾಜಿ ಮುಖ್ಯಮಂತ್ರಿ  ಎಸ್.ಎಂ.ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ಸಿದ್ದಾರ್ಥ್ ಅವರ ಸಾವು ತೀವ್ರ ಆಘಾತ ಹಾಗೂ ಅಪಾರ ನೋವು ತಂದಿದೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.

ಸಿದ್ದಾರ್ಥ್ ಅವರ ನಿಧನದ ಸುದ್ದಿಯಿಂದ ತೀವ್ರ ಆಘಾತವಾಗಿದೆ. ನಿಜಕ್ಕೂ ಅವರ ನಿಧನದಿಂದ ದೇಶಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಸಿದ್ದಾರ್ಥ್ ಅವರದ್ದು ತುಂಬಾ ಸರಳ ವ್ಯಕ್ತಿತ್ವ. ಸಾವಿರಾರು ಜನಕ್ಕೆ ಸ್ವಾಭಿಮಾನದಿಂದ ಬದುಕಲು ದಾರಿ ಮಾಡಿಕೊಟ್ಟಿದ್ದ ನಂದಾದೀಪ ಅವರು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ, ನಾಡಿನ ಅಸಂಖ್ಯಾತ ಕಾರ್ಮಿಕ ಬಂಧುಗಳಿಗೆ ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ತುಂಬಲಿ ಎಂದಿದ್ದಾರೆ.


Spread the love