ಕಾಯ್ದೆ ತಿದ್ದುಪಡಿಗಳ ವಿರುದ್ಧ ಉಡುಪಿ ಜಿಲ್ಲಾ ಜೆ.ಡಿ.ಎಸ್ ವತಿಯಿಂದ ಪ್ರತಿಭಟನೆ

Spread the love

ಕಾಯ್ದೆ ತಿದ್ದುಪಡಿಗಳ ವಿರುದ್ಧ ಉಡುಪಿ ಜಿಲ್ಲಾ ಜೆ.ಡಿ.ಎಸ್ ವತಿಯಿಂದ ಪ್ರತಿಭಟನೆ

ಉಡುಪಿ: ಈಗಾಗಲೇ ಸರ್ಕಾರದವರು ಮೂರು ತಿದ್ದುಪಡಿ ಕಾಯ್ದೆಗಳನ್ನು ಹೊರತಂದಿದ್ದಾರೆ. ಭೂ ಸುಧಾರಣಾ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ನಮ್ಮ ಪಕ್ಷ ಉಗ್ರವಾಗಿ ವಿರೋಧ ಮಾಡುತ್ತೆ. ಈ ಕಾಯ್ದೆ ವಿರುದ್ದ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ನಾನು ನಾಳೆ ಹಾಸದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಎಚ್.ಡಿ.ದೇವೇಗೌಡ ಅವರು ಹೇಳಿದರು.

ರಾಜ್ಯ ಸರಕಾರ ಈಗಾಗಲೇ ತಿದ್ದುಪಡಿ ತಂದಿರುವ ಭೂ ಸುಧಾರಣಾ, ಎಪಿ ಎಂ ಸಿ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರು ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕ. ಸಣ್ಣ, ಮಧ್ಯಮ ವರ್ಗದ ರೈತರಿಗೆ ಅನ್ಯಾಯವಾಗುತ್ತಿದೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಅನಾನುಕೂಲವೇ ಹೆಚ್ಚು ಎಂದರು.

ಸರ್ಕಾರ ತಂದಿರುವ ಮೂರು ಕಾಯ್ದೆಗಳಿಗೆ ನಮ್ಮ ಸಮ್ಮತಿ ಇಲ್ಲ. ಈ ಕಾಯಿದೆಗಳನ್ನು ಸುಗ್ರಿವಾಜ್ಞೆ ಮೂಲಕ ಅನುಷ್ಠಾನಕ್ಕೆ ತಂದಿದ್ದಾರೆ. ಇದನ್ನ ನಾವು ವಿರೋಧಿಸುತ್ತೇವೆ.

ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕವಾಗಿದೆ , ಸಣ್ಣ , ಮಧ್ಯಮ ವರ್ಗದ ರೈತರಿಗೆ ಇದರಿಂದ ಅನ್ಯಾಯವಾಗುತ್ತದೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಜನತೆಗೆ ಅನಾನುಕೂಲವೇ ಹೆಚ್ಚು ಎಂದು ಹೇಳಿದರು.

ಬಳಿಕ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮನವಿಯನ್ನು ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಜೆ ಡಿಎಸ್ ನಾಯಕರಾದ ಶ್ರೀಕಾಂತ್ ಅಡಿಗ, ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ , ಬಿ.ಟಿ ಮಂಜುನಾಥ, ರಂಜಿತ್ ಬೈಂದೂರು, ಕಿಶೋರ್ ಕುಂದಾಪುರ, ರಾಜು ದೇವಾಡಿಗ , ಪ್ರಕಾಶ್ ಶೆಟ್ಟಿ ಬೆಳ್ಳಂಪಳ್ಳಿ , ರವಿರಾಜ್ ಸಾಲಿಯಾನ್, ಶ್ರೀಕಾಂತ್ ಹೆಬ್ರಿ, ಎಸ್ ಪಿ ಬರ್ಬೋಜಾ, ಅಬ್ದುಲ್ ಹಮೀದ್ ಯೂಸೂಫ್, ರಮೇಶ್ ಕುಂದಾಪುರ, ಮಾರುತಿ ಮೊಗೇರ, ಶಂಶುದ್ದೀನ್ ಮಜೂರು, ವಾಲ್ಟರ್ ಬಾರ್ಕೂರು , ರಶೀದ್ ಯು.ಎ, ಪ್ರಶಾಂತ್ ಭಂಡಾರಿ, ಪ್ರಶಾಂತ್ ಸಾಲಿಯಾನ್, ಮಹಮ್ಮದ್ ಹ್ಯಾರಿಸ್, ಸನವರ, ಸಂಪತ್, ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.


Spread the love