ಕಾರವಾರ: ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು

Spread the love

ಕಾರವಾರ: ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು

ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿಗಳಿಗೆ ಶೋಧ ಕಾರ್ಯ ನಡೆದಿದೆ.

ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮುರುಡೇಶ್ವರ ಬೀಚ್​ನಲ್ಲಿ ಇಂದು ಸಂಜೆ ಮುರ್ಡೇಶ್ವರ ಬೀಚ್​ನಲ್ಲಿ ಆಟವಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.

ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂರು ಜನ ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃದೇಹವನ್ನು ಹೊರತೆಗೆಯಲಾಗಿದೆ.

ಇನ್ನುಳಿದಂತೆ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.


Spread the love
Subscribe
Notify of

0 Comments
Inline Feedbacks
View all comments