Home Mangalorean News Kannada News ಕಾರ್ಮಿಕ ಭವನ ಕಟ್ಟಡಕ್ಕೆ ಶಿಲಾನ್ಯಾಸ

ಕಾರ್ಮಿಕ ಭವನ ಕಟ್ಟಡಕ್ಕೆ ಶಿಲಾನ್ಯಾಸ

Spread the love

ಕಾರ್ಮಿಕ ಭವನ ಕಟ್ಟಡಕ್ಕೆ ಶಿಲಾನ್ಯಾಸ

ನಗರದ ಕದ್ರಿ ಎಯ್ಯಾಡಿಯಲ್ಲಿ  ಸುಮಾರು ರೂ.4.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾರ್ಮಿಕ ಭವನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಾ ಕಳೆದ ಒಂದು ವರ್ಷದ ಹಿಂದೆ ಕಾರ್ಮಿಕ ಭವನ ಕಟ್ಟಡಕ್ಕೆ ಮಂಜೂರಾತಿ ದೊರೆತಿದೆ.

ಈ ಪ್ರದೇಶದಲ್ಲಿ ಕೆಪಿಟಿ, ಐಟಿಐ, ಮಹಿಳಾ ಐಟಿಐ ಇದ್ದು, ಬಹಳಷ್ಟು ಪ್ರಯೋಜನಕಾರಿಯಾಗಲಿದೆ. ಕಾರ್ಮಿಕರ ವಿವಿಧ ಕಾರ್ಯಕ್ರಮಗಳನ್ನು ಜರಗಿಸಲಿಕ್ಕೆ ಇಲಾಖೆಗಳ ಕಾರ್ಯಕ್ರಮ ಹಾಗೂ ಕಾರ್ಮಿಕರಿಗೆ ತರಭೇತಿಯನ್ನು ಕೊಡುವಂತಹ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲಕರವಾಗಲಿದೆ. ಸುಮಾರು 50 ಸೆಂಟ್ಸ್ ಜಾಗವಿರುವ ಈ ಪ್ರದೇಶದಲ್ಲಿ ಜಿ+2 ಮಾದರಿಯಲ್ಲಿ ಕಟ್ಟಡವನ್ನು ಕಟ್ಟಲಾಗುವುದು. ಕೆಳ ಅಂತಸ್ತು ಕೂಡ ಇರುತ್ತದೆ. ಕಟ್ಟಡದ ವಿಸ್ತೀರ್ಣ 11,000 sq. ಜಿಣ ಇದೆ. ಒಂದು ವರ್ಷದ ಅವಧಿಯಲ್ಲಿ ಕಟ್ಟಡದ ಕಾಮಗಾರಿಯನ್ನು ಪೂರ್ತಿಗೊಳಿಸುವುದು ಎಂದರು.

ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆಯ ಹಣಕಾಸು ಸ್ಥಾಯೀ ಸಮಿತಿ ಅಧ್ಯಕ್ಷ ರಾಧಾಕೃಷ್ಣ, ಕೆ.ಎಸ್.ಆರ್.ಟಿ.ಸಿ ನಿರ್ದೇಶಕ ಟಿ.ಕೆ.ಸುಧೀರ್, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ನಾಗರಾಜ್, ಲೋಕೊಪಯೋಗಿ ಇಲಾಖೆಯ ಇಂಜಿನಿಯರ್ಗಳಾದ ರವಿಕುಮಾರ್, ದಾಸ್ ಪ್ರಕಾಶ್ ಹಾಗೂ ಮುಖಂಡರಾದ ರಮಾನಂದ ಪೂಜಾರಿ, ಚೇತನ್ ಕುಮಾರ್ ಉಪಸ್ಥಿತರಿದ್ದರು.

ಮೂರು ತಿಂಗಳಲ್ಲಿ ಉರ್ವ ಮಾರ್ಕೆಟ್ ಕಾಮಗಾರಿ ಪೂರ್ತಿ- ಶಾಸಕ ಶ್ರೀ ಜೆ.ಆರ್.ಲೋಬೊ

ಪ್ರಸ್ತುತ ಮಂಗಳೂರಿನಲ್ಲಿ ಮಾರ್ಕೆಟ್ ಗಳ ಅಭಿವೃದ್ಧಿ ಕಾರ್ಯಗಳು ಬಹಳ ಮಹತ್ವವನ್ನು ಪಡೆದಿದೆ. ಈಗಾಗಲೇ ಬಿಜೈ ಮಾರ್ಕೆಟ್ ಹಾಗೂ ಜೆಪ್ಪು ಮಾರ್ಕೆಟ್ ಕಾಮಗಾರಿಗಳು ಪೂರ್ತಿಯಾಗಿ ಲೋಕಾರ್ಪಣೆಯಾಗಿದೆ. ಅದೇ ರೀತಿ ಕಾಮಗಾರಿ ಹಂತದಲ್ಲಿರುವ ಉರ್ವ ಮಾರ್ಕೆಟ್ ಸಂಕೀರ್ಣಕ್ಕೆ  ಮಂಗಳೂರು ದಕ್ಷಿಣ  ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ.ಜೆ.ಆರ್.ಲೋಬೊರವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಸುಮಾರು ರೂ.12.75 ಕೋಟಿ  ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ತ್ವರಿತ ಗತಿಯಲ್ಲಿ ಕಾಮಗಾರಿ ನಡೆಯುತ್ತಿದೆ.

ಬಳಿಕ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಕಳೆದ 9 ತಿಂಗಳ ಹಿಂದೆ ಶಿಲಾನ್ಯಾಸ ಕಾರ್ಯ ನಡೆದಿದ್ದು, ಈಗ ಅದು ಮುಕ್ತಾಯದ ಹಂತದಲ್ಲಿದೆ. ಮುಂದಿನ ಮೂರು ತಿಂಗಳ ಒಳಗೆ ಕಾಮಗಾರಿಯು ಸಂಪೂರ್ಣಗೊಳ್ಳಲಿದ್ದು, ಎಲ್ಲರಿಗೂ ಸಮಾಧಾನಕರವಾಗಿ ಕೆಲಸವನ್ನು ಪೂರ್ತಿಗೊಳಿಸಲಾಗುವುದು. ಸಸ್ಯಹಾರಿ ಹಾಗೂ ಹಣ್ಣುಹಂಪಲುಗಳ ಕೌಂಟರ್ ಗಳನ್ನು ಪ್ರತ್ಯೇಕವಾಗಿ ಮಾಡಲಾಗುವುದು.  ಸುಮಾರು 60 ಮಂದಿ ಮೀನು ವ್ಯಾಪಾರಸ್ಥರು ಶಾಸಕರಲ್ಲಿ ಮನವಿಯನ್ನು ಅರ್ಪಿಸಿ ಎತ್ತರದಲ್ಲಿ ಮೀನು ಮಾರಾಟ ಮಾಡಲು ಕಷ್ಟವಾಗುತ್ತದೆ. ಅದರ ಬದಲಿಗೆ ನೆಲದಲ್ಲಿ ಮಾರುವ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಕೇಳಿಕೊಂಡಿದ್ದಾರೆ.

ಮನವಿಗೆ ಪೂರಕವಾಗಿ ಸ್ಪಂದಿಸಿದ ಶಾಸಕರು ಅವರ ಬೇಡಿಕೆಯನ್ನು ಪರಿಶೀಲಿಸಿ ನ್ಯಾಯ ಒದಗಿಸಿಕೊಡುವುದಾಗಿ ಹೇಳಿದರು. ನಗರದ ಕದ್ರಿ ಮಾರ್ಕೆಟ್ ಹಾಗೂ ಕಂಕನಾಡಿ ಮಾರ್ಕೆಟ್ ಕಾಮಗಾರಿ ವಿಷಯ ಸರಕಾರದ ಕ್ಯಾಬಿನೆಟ್ ಗೆ ಹೋಗಿದೆ. ಸೆಂಟ್ರಲ್ ಮಾರ್ಕೆಟ್ ಅಭಿವೃದ್ಧಿ ಕಾಮಗಾರಿಯು ಸ್ಮಾರ್ಟ್ ಸಿಟಿ ಪ್ಯಾಕೆಟ್ ನಲ್ಲಿದೆ. ಈ ಸಂದರ್ಭದಲ್ಲಿ ಮೂಡ ಅಧ್ಯಕ್ಷ ಸುರೇಶ್ ಬಲ್ಲಾಳ್, ಮಹಾನಗರ ಪಾಲಿಕೆಯ ಹಣಕಾಸು ಸಮಿತಿ ಅಧ್ಯಕ್ಷ ರಾಧಾಕೃಷ್ಣ, ಮಾಜಿ ಕಾರ್ಪೋರೇಟರ್ ಕಮಲಾಕ್ಷ ಸಾಲ್ಯಾನ್, ಕೆ.ಎಸ್.ಆರ್.ಟಿ.ಸಿ  ನಿರ್ದೇಶಕ ಟಿ.ಕೆ.ಸುಧೀರ್ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಕಾಂಚನ್, ದೀಪಕ್ ಶ್ರೀಯಾನ್, ಚೇತನ್ ಕುಮಾರ್ ಉರ್ವ, ಗುತ್ತಿಗೆದಾರ ಆಸೀಫ್, ಮೂಡ ಆಯುಕ್ತ ಶ್ರೀಕಾಂತ್ ರಾವ್, ಪಾಳಿಕೆ ಅಧೀಕ್ಷಕ ಅಭಿಯಂತರ ರಂಗನಾಥ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version