ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ
ಸುಳ್ಯ: ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಳ್ಯಪೊಲೀಸರ ವಿರುದ್ಧ ಹಾಗೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಧರ್ಮದ ಯುವಕನ ನಡೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಸುಳ್ಯ ಠಾಣಾಬಳಿಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ನಡೆಯಿತು.
ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ತಪ್ಪು ಮಾಡಿದವರ ಮೇಲೆ ಕ್ರಮಕೈಗೊಳ್ಳಲಿ. ಪೊಲೀಸರು ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಬೇಕು. ತಪ್ಪು ಮಾಡಿರುವ ಪೊಲೀಸ್ ಸಿಬಂದಿಯನ್ನು ವರ್ಗಾಯಿಸಬೇಕು ಎಂದರು.
ಬಿಜೆಪಿ ಮುಖಂಡ ಎ. ವಿ. ತೀರ್ಥರಾಮ ಮಾತನಾಡಿ, ಯಾವುದೇ ಗಲಾ ಟೆಗೆ ಪೊಲೀಸರು ಆಸ್ಪದ ನೀಡಬಾರದು. ನಾವು ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದೇವೆ. ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಆರೆಸ್ಟ್ ಮಾಡಬೇಕೆಂದು ಒತ್ತಾಯಿಸಿದರು.
ಪುತ್ತೂರು ಡಿವೈಎಸ್‌ಪಿ ಡಾ| ಅರುಣ್ ನಾಗೇಗೌಡ ಪ್ರತಿಭಟನಾಕಾರರ ಜತೆ ಮಾತನಾಡಿ, ನಾವು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದೇವೆ. ನಿಮ್ಮ ಬೇಡಿಕೆಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದರು.