ಕಾವೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಾಲ್ಕು ಪ್ರಕರಣಗಳ ಆರೋಪಿ ಸೆರೆ
ಮಂಗಳೂರು: ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಕಸಬಾ ಬೆಂಗರೆಯ ಮುನೀರ್ ಯಾನೆ ಅಣ್ಣ ಮುನೀರ್ (48) ಎಂಬಾತನನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಆರೋಪಿಯನ್ನು ಮುಂದಿನ ಕ್ರಮಕ್ಕೆ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿಯು ಈ ಹಿಂದೆ ಪಾಂಡೇಶ್ವರ, ಕಾವೂರು, ಮಂಗಳೂರು ಗ್ರಾಮಾಂತರ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಕಳವು, ಕೊಲೆಯತ್ನ, ದರೋಡೆಗೆ ಯತ್ನ, ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
ಈತ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದನು ಎಂದು ತಿಳಿದು ಬಂದಿದೆ.