ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತ ರಾಮ್ ಅಜೆಕಾರ್ ಆಯ್ಕೆ
ಕಾಸರಗೋಡು: ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಕನ್ನಡಪ್ರಭ ವರದಿಗಾರ ರಾಮ್ ಅಜೆಕಾರ್ ಆಯ್ಕೆಯಾಗಿದ್ದಾರೆ.
ಕನ್ನಡ ಪ್ರಭ ಪತ್ರಿಕೆಯಲ್ಲಿ ಜನವರಿ 31 ರಂದು ಪ್ರಕಟವಾದ ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ ? ಶೀರ್ಷಿಕೆಯಡಿ ಪ್ರಕಟವಾದ ಅಜೆಕಾರಿನ ಡೊಂಬರಪಲ್ಕೆಯ ಶ್ರೀನಿವಾಸ್ ಯಾನೆ ಅಪ್ಪಿಯಣ್ಣ ಅವರು ಕಳೆದ ಐವತ್ತು ವರ್ಷಗಳಿಂದ ರಸ್ತೆ ದುರಸ್ತೀ ಮಾಡುವ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ಮರ್ಣೆ ಪಂಚಾಯತ್ ಸ್ಪಂದಿಸಿ ರಸ್ತೆ ದುರಸ್ಥಿ ಗೊಳಿಸಿತ್ತು. ಅಂದಿನ ತಾಪಂ ಸಿ ಇಒ ಅಗಿದ್ದ ಕೆ ಜಿ ಶಶಿಧರ್ ಭೇಟಿ ನೀಡಿದ್ದರು. ಅದರಲ್ಲೂ ಅಜೆಕಾರು ನಾಡ ಕಛೇರಿಯ ತಹಶೀಲ್ದಾರ್ ನಮೀತ ಬೇಟಿ ನೀಡಿದ್ದರು..
ಹಿರಿಯ ಉದ್ಯಮಿ ಹಾಗೂ ದಾನಶೂರ ಅಶ್ರಫ್ ಷಾ ಮಂತೂರು ಅವರ ದತ್ತಿನಿಧಿಯಿಂದ ನೀಡಲಾಗುವ ಪ್ರಶಸ್ತಿ ಇದಾಗಿದೆ. ಪ್ರಶಸ್ತಿಯು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ಪ್ರಶಸ್ತಿ ಪ್ರದಾನ ಸಮಾರಂಭ ಮೇ 3 ರಂದು ಸೀತಾಂಗೋಳಿಯ ಎಲೈನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಸ್ವಾಗತ ಸಮಿತಿಯ ಅಧ್ಯಕ್ಷ ಕೆ. ಕೆ. ಶೆಟ್ಟಿ ಕುತ್ತಿಕಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕೃಷಿ ಸಚಿವ ಚೆಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.