Home Mangalorean News Kannada News ಕಿಸಾನ್ ಕಾರ್ಡ್ ಹೊಂದಿದ ಮೀನುಗಾರಿಗೆ ಸಾಲ ಸೌಲಭ್ಯ – ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಿಸಾನ್ ಕಾರ್ಡ್ ಹೊಂದಿದ ಮೀನುಗಾರಿಗೆ ಸಾಲ ಸೌಲಭ್ಯ – ಸಚಿವ ಕೋಟ ಶ್ರೀನಿವಾಸ ಪೂಜಾರಿ

Spread the love

ಕಿಸಾನ್ ಕಾರ್ಡ್ ಹೊಂದಿದ ಮೀನುಗಾರಿಗೆ ಸಾಲ ಸೌಲಭ್ಯ – ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು : ರಾಜ್ಯ ಸರ್ಕಾರವು ಆತ್ಮ ನಿರ್ಮಲ ಯೋಜನೆ ಅಡಿಯಲ್ಲಿ ಮೀನುಗಾರಿಕೆ ಇಲಾಖೆಯ ಮೂಲಕ ಸ್ವಯಂ ಉದ್ಯೋಗದಲ್ಲಿ ತೊಡಗಿಕೊಳ್ಳಲು ಯೋಜನೆಯನ್ನು ರೂಪಿಸಿಕೊಂಡಿದೆ. ಈ ಯೋಜನೆಯ ಮೂಲಕ ತರಬೇತಿ ಪಡೆದುಕೊಂಡು ಪಂಜರ ಮೀನುಕೃಷಿಯಲ್ಲಿ ಯಶಸ್ಸು ಕಾಣಬೇಕು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಶನಿವಾರ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಪಂಜರ ಮೀನುಕೃಷಿ ಕಾರ್ಯಾಗಾರವನ್ನು ಉದ್ಘಾಟಿಸಿ ಇಲಾಖಾ ಮಾಹಿತಿಗಳ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿ ಪಂಜರ ಮೀನು ಕೃಷಿಯು ಈ ಹಿಂದೆ ಗುಜರಾತ್, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಒರಿಸ್ಸಾ ರಾಜ್ಯದಲ್ಲಿ ಮಾತ್ರ ಕಾಣಲು ಸಾಧ್ಯವಾಗಿತ್ತು. ಕರ್ನಾಟಕದಲ್ಲಿ ಈ ಯೋಜನೆ ಜಾರಿಗೊಳಿಸುವುದರ ಮೂಲಕ ಮೀನುಗಾರಿಕೆಯಲ್ಲಿ ಮಹತ್ವದ ಬದಲಾವಣೆಯನ್ನು ಪಡೆಯಬಹ್ಮದು ಎಂದರು.

ಕೇಂದ್ರ ಸರ್ಕಾರವು ಮೀನುಗಾರರನ್ನು ಪ್ರೋತ್ಸಾಹಿಸಲು ಡಿಸಿಸಿ ಬ್ಯಾಂಕ್ ವತಿಯಿಂದ ಕಿಸಾನ್ ಕಾರ್ಡ್ ಹೊಂದಿದವರಿಗೆ ರೂ. 2 ರಿಂದ 3 ಲಕ್ಷ ಸಾಲವನ್ನು ನೀಡುತ್ತಿದೆ. ಈ ಯೋಜನೆಯ ಮೂಲಕ 10 ಸಾವಿರ ಜನರಿಗೆ ಸ್ವಯಂ ಉದ್ಯೋಗ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದು, ಮೀನುಗಾರಿಕೆ ಇಲಾಖೆಯವರು ಒಟ್ಟುಗೂಡಿ ಒಂದು ತಂಡವಾಗಿ ಶ್ರಮಿಸಿದರೆ ಈ ಯೋಜನೆಯನ್ನು ತಳಮಟ್ಟದ ಜನರಿಗೆ ತಲುಪುವಂತೆ ಮಾಡಿ ಯೋಜನೆ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಸರ್ಕಾರವು ಮಹಿಳಾ ಮೀನುಗಾರರಿಗೆ ಮತ್ಸ್ಯ ಮಹಿಳಾ ಸ್ವಾವಲಂಬನಾ ಯೋಜನೆ ಮುಖಾಂತರ ಸ್ವಸಹಾಯ ಗುಂಪಿನಲ್ಲಿ ದುಡಿಯುವುದಕ್ಕಾಗಿ ಬಂಡವಾಳ ರೂಪದಲ್ಲಿ ರೂ. 2 ಲಕ್ಷ ಹಾಗೂ ಸಹಕಾರಿ ಸಂಘದ ಸದಸ್ಯ ಗುಂಪುಗಳಿಗೆ ರೂ. 50 ಸಾವಿರ ನೆರವು ನೀಡಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯುವ ಮುನ್ನ ಲೈಫ್ ಜಾಕೆಟ್ ಧರಿಸಬೇಕು ಮತ್ತು ಮುಂದಿನ ದಿನದಲ್ಲಿ ಮೀನುಗಾರರಿಗೆ ಹೆಚ್ಚಿನ ಸೌಲಭ್ಯಗಳನ್ನು ಸರಕಾರದ ವತಿಯಿಂದ ನೀಡಲಾಗುವುದು. ದ.ಕ. ಜಿಲ್ಲೆಯಲ್ಲಿ ಸೆಪ್ಪೆಂಬರ್ 1 ರಿಂದ ಮೀನುಗಾರಿಕೆ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಗಾರದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ಸಿಂಹ ನಾಯಕ್, ಮಂಗಳ್ರರು ದಕ್ಷಿಣ ಶಾಸಕ ವೇದವ್ಯಾಸ್ ಕಾವ್ಮತ್, ಉತ್ತರ ಶಾಸಕ ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಮೀನುಗಾರಿಕೆ ನಿರ್ದೇಶಕ ರಾಮಾಚಾರ್ಯ, ಮೀನುಗಾರಿಕೆ ಇಲಾಖೆ ಸಿಬ್ಬಂದಿಗಳು ಹಾಗೂ ವಿವಿಧ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

Exit mobile version