ಕುಂದಾಪುರದಲ್ಲಿ ಭಾರತ ಭಾಗ್ಯವಿಧಾತ- ದೃಶ್ಯ ವೈಭವಗಳ ರೂಪಕ
ಉಡುಪಿ:‘ಭಾರತ ಭಾಗ್ಯವಿಧಾತ’ – ಇದು ಭಾರತದ ತಳ ಸಮುದಾಯಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ ಮಹಾಚೇತನದ ಜೀವನ ಚರಿತೆ. ನೊಂದವರ ನೋವಿಗೆ ದನಿಯಾಗಿ ನಿಂತ ಧೀಮಂತ ನಾಯಕನ ಆತ್ಮಕತೆ. ತನ್ನ ಪ್ರತಿಭೆ, ಪರಿಶ್ರಮಗಳಿಂದ ಜಗತ್ತಿನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪದವಿ ಪುರಸ್ಕಾರ ಗಳಿಸಿದ ಆರ್ಥಿಕ ತಜ್ಞನ ಯಶೋಗಾಥೆ. ಭಾರತ ಸಂವಿಧಾನ ಶಿಲ್ಪಿಯೆಂದೇ ಖ್ಯಾತರಾದ ಮಹಾ ಮಾನವತಾವಾದಿಯ ಜೀವಗಾಥೆ.
ಧ್ವನಿ ಬೆಳಕು ದೃಶ್ಯ ವೈಭವಗಳ ರೂಪಕ ಫೆಬ್ರವರಿ 10 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಎಲ್ಲರಿಗೂ ಉಚಿತ ಪ್ರವೇಶ. ಇದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರ ಪರಿಕಲ್ಪನೆಯಲ್ಲಿ ಮೂಡಿ ಬಂದ ಕಾರ್ಯಕ್ರಮವಾಗಿದೆ.