Home Mangalorean News Kannada News ಕುಂದಾಪುರ: ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಶ್ರೀರಾಮುಲು

ಕುಂದಾಪುರ: ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಶ್ರೀರಾಮುಲು

Spread the love
RedditLinkedinYoutubeEmailFacebook MessengerTelegramWhatsapp

ಕುಂದಾಪುರ: ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಶ್ರೀರಾಮುಲು

ಕುಂದಾಪುರ: ಕುಂದಾಪುರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಅಫಘಾತಕ್ಕೊಳಗಾದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಆರೋಗ್ಯ ಸಚಿವ ಶ್ರೀರಾಮುಲು ಶನಿವಾರ ಮಾನವೀಯತೆ ಮೆರೆದಿದ್ದಾರೆ.

ಶನಿವಾರ ಸಚಿವ ಶ್ರೀರಾಮುಲು ಕುಂದಾಪುರದಲ್ಲಿ ನೂತನವಾಗಿ ನಿರ್ಮಿಸಲಾದ ಸರಕಾರಿ ಆಸ್ಪತ್ರೆಯ ಉದ್ಘಾಟನೆಗಾಗಿ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ವೇಳೆ ಕೋಟೇಶ್ವರ ಬಳಿ ರಿಕ್ಷಾವೊಂದು ಡಿವೈಡರ್ ಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದ್ದು ರಿಕ್ಷಾದಲ್ಲಿನ ಮೂವರಿಗೆ ಗಾಯವಾಗಿತ್ತು.

ಅಪಘಾತ ನಡೆದಿರುವುದನ್ನು ಗಮನಿಸಿದ ಶ್ರೀರಾಮುಲು ಮತ್ತು ಉಡುಪಿ ಶಾಸಕ ರಘುಪತಿ ಭಟ್ ತಮ್ಮ ವಾಹನವನ್ನು ನಿಲ್ಲಿಸಿ ಅಪಘಾತ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನಪಡಿಸಿದರು. ಬಳಿಕ ಗಾಯಾಳುಗಳನ್ನು ತಾನೇ ಎತ್ತಿ ಶಾಸಕ ರಘುಪತಿ ಭಟ್ ಅವರ ಕಾರಿನಲ್ಲಿ ಕೂರಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.


Spread the love

Exit mobile version