Home Mangalorean News Kannada News ಕುಂದಾಪುರ ಪೊಲೀಸರಿಂದ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ 20 ಮೊಬೈಲ್ ಹಸ್ತಾಂತರ

ಕುಂದಾಪುರ ಪೊಲೀಸರಿಂದ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ 20 ಮೊಬೈಲ್ ಹಸ್ತಾಂತರ

Spread the love

ಕುಂದಾಪುರ ಪೊಲೀಸರಿಂದ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ 20 ಮೊಬೈಲ್ ಹಸ್ತಾಂತರ

ಕುಂದಾಪುರ: ಕಳೆದ ಒಂದು ವರ್ಷದಲ್ಲಿ (2023ರ ಜನವರಿ ಯಿಂದ ಡಿಸೆಂಬರ್ ತಿಂಗಳವರೆಗೆ) ಮೊಬೈಲ್ ಕಳೆದು ಕೊಂಡು ಸಿಇಐಆರ್ ಪೋರ್ಟಲ್ ಮೂಲಕ ಪೊಲೀಸರಿಗೆ ದೂರು ನೀಡಿದವರ 20 ಮೊಬೈಲ್ ಫೋನುಗಳನ್ನು ಕುಂದಾಪುರ ಪೊಲೀಸರು ಪತ್ತೆ ಮಾಡಿದ್ದು ಗುರುವಾರದಂದು ಪೊಲೀಸ್ ಠಾಣೆಯಲ್ಲಿ ಮೊಬೈಲ್ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ದಾಖಲಾದ ದೂರು ಆಧರಿಸಿ ಪ್ರಕರಣದ ಬೆನ್ನುಬಿದ್ದ ಪೊಲೀಸರು ಸಿಇಐಆರ್ (ಸೆಂಟ್ರಲ್ ಇಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್) ಪೋರ್ಟಲ್ ಮೂಲಕ ತನಿಖೆ ಕೈಗೊಂಡು 20 ಮೊಬೈಲ್ಗಳನ್ನು ಪತ್ತೆ ಮಾಡಿದ್ದಾರೆ. ಇದರಲ್ಲಿ ಒಂದು ಮೊಬೈಲ್ ಜಾರ್ಖಂಡ್ ಹಝಾರಿಭಾಗ್ ಎಂಬಲ್ಲಿ ಮತ್ತು ಇನ್ನೊಂದು ಮೊಬೈಲನ್ನು ಆಂಧ್ರಪ್ರದೇಶದ ಗೊಂಡ ಎಂಬಲ್ಲಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿ, ಬೆಂಗಳೂರು ಸಹಿತ ಕರ್ನಾಟಕದ ವಿವಿಧೆಡೆ ಗಳಿಂದ ಉಳಿದ ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಎಸ್.ಟಿ.ಸಿದ್ಧಲಿಂಗಪ್ಪ ನಿರ್ದೇಶನದಲ್ಲಿ ಕುಂದಾಪುರ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ ನೇತೃತ್ವದಲ್ಲಿ, ಕುಂದಾಪುರ ನಗರ ಠಾಣೆ ನಿರೀಕ್ಷಕ ನಂದಕುಮಾರ್, ಉಪ ನಿರೀಕ್ಷಕರಾದ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಪ್ರಸಾದ್ ಮತ್ತು ಸಿಬ್ಬಂದಿಗಳಾದ ಸಿದ್ಧಪ್ಪ, ಮಾರುತಿ, ಅವಿನಾಶ ಕಾರ್ಯಾಚರಣೆ ನಡೆಸಿದ್ದರು.


Spread the love

Exit mobile version