Home Mangalorean News Kannada News ಕುಂದಾಪುರ :ಸೈಂಟ್ ಮೇರಿಸ್ ಪಿ.ಯು. ಕಾಲೇಜಿಗೆ ಶೇ.100 ಫಲಿತಾಂಶ

ಕುಂದಾಪುರ :ಸೈಂಟ್ ಮೇರಿಸ್ ಪಿ.ಯು. ಕಾಲೇಜಿಗೆ ಶೇ.100 ಫಲಿತಾಂಶ

Spread the love

ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಸೈಂಟ್ ಮೇರಿಸ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದೆ.

st maryskundapura

ವಾಣಿಜ್ಯ ವಿಭಾಗದಲ್ಲಿ ಕು.ಅನುಷಾ 564 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಪ್ರೀಥನ್ ಕರ್ವಾಲ್ಲೊ 548 ಅಂಕಗಳನ್ನು ಹಾಗೂ ಕಲಾ ವಿಭಾಗದಲ್ಲಿ ಮನೀಷ್ 484 ಅಂಕಗಳನ್ನು ಪಡೆದು ವಿಭಾಗವಾರು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

10 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 84 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲ ಫಾ. ಪ್ರವೀಣ್ ಅಮೃತ್ ಮಾರ್ಟಿಸ್ ಪ್ರಕಟಣಿಯಲ್ಲಿ ತಿಳಿಸಿದ್ದಾರೆ.


Spread the love

Exit mobile version