Home Mangalorean News Kannada News ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ದೀಪಾವಳಿ ಶುಭಾಶಯ

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ದೀಪಾವಳಿ ಶುಭಾಶಯ

Spread the love

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ದೀಪಾವಳಿ ಶುಭಾಶಯ

ಕೋಟ: ದೀಪಾವಳಿ ಹಬ್ಬದ ಪ್ರಯುಕ್ತ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅವರನ್ನು ಅವರ ಕೋಟದ ನಿವಾಸದಲ್ಲಿ ಬುಧವಾರ ಭೇಟಿಯಾಗಿ ಹಬ್ಬದ ಶುಭಾಶಯ ಕೋರಲಾಯಿತು.

ಇದೇ ವೇಳೆ ರಾಜ್ಯದಲ್ಲಿ ತೆರವಾಗಿರುವ ಕ್ರೈಸ್ತ ಅಭಿವೃದ್ಧಿ ಮಂಡಳಿ ಮತ್ತು ಅಲ್ಪಸಂಖ್ಯಾತ ನಿಗಮದಲ್ಲಿ ಉಡುಪಿ ಜಿಲ್ಲೆಯ ಕ್ರೈಸ್ತ ಸಮುದಾಯದ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು ಈ ಬಗ್ಗೆ ಕೂಡಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಮತ್ತು ಉಡುಪಿ ಜಿಲ್ಲೆಯ ಕ್ರೈಸ್ತ ಸಮುದಾಯ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ನಿಯೋಗದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್, ಕಾರ್ಯದರ್ಶಿ ಸಂತೋಷ್ ಕರ್ನೆಲಿಯೊ, ನಿಕಟಪೂರ್ವ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್, ಮಾಜಿ ಅಧ್ಯಕ್ಷರಾದ ಎಲ್ ರೋಯ್ ಕಿರಣ್ ಕ್ರಾಸ್ಟೊ, ಉಪಾಧ್ಯಕ್ಷರಾದ ಫ್ಲೈವನ್ ಡಿಸೋಜಾ, ನಿಯೋಜಿತ ಅದ್ಯಕ್ಷರಾದ ರೋಬರ್ಟ್ ಮಿನೇಜಸ್, ಹಿರಿಯ ಸದಸ್ಯರಾದ ವಲೇರಿಯನ್ ಮಿನೇಜಸ್, ಕೆಥೊಲಿಕ್ ಸಭಾ ಕೋಟ ಘಟಕದ ಅಧ್ಯಕ್ಷರಾದ ಹೆರಾಲ್ಡ್ ಫೆರ್ನಾಂಡಿಸ್, ಕಾರ್ಯದರ್ಶಿ ಸೈರಾ ಕ್ವಾಡ್ರಸ್, ಪದಾಧಿಕಾರಿಗಳಾದ ಮ್ಯಾಕ್ಷಿಮ್ ಡಾಯಸ್, ಜೋರ್ಜ್ ಸಾಲಿನ್ಸ್, ರಫಾಯೆಲ್ ಡಿಸೋಜಾ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version