ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಪದಗ್ರಹಣ – ಸಾಕ್ಷಿಯಾದ ಉಡುಪಿ ಜಿಲ್ಲಾ ಕಾಂಗ್ರೆಸ್
ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ 41ನೇ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಗುರುವಾರ ಪದಗ್ರಹಣ ಸ್ವೀಕರಿಸಿದ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅದ್ದೂರಿಯಾಗಿ ಸಾಕ್ಷಿಯಾಯಿತು.
ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರವನ್ನು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಅಳವಿಡಿಸಿದ್ದ ಬೃಹತ್ ಟಿವಿ ಪರದೆಯಲ್ಲಿ ಲೈವ್ ವೀಕ್ಷಣೆ ಮಾಡುವ ಮೂಲಕ ಪ್ರದಗ್ರಹಣ ಸಮಾರಂಭವನ್ನು ಸಾಕ್ಷಿಕರಿಲಾಯಿತು.
ಚೈನಾ ಗಡಿಯಲ್ಲಿ ಸಾವನಪ್ಪಿದ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿ ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಿಸುವ ಮೂಲಕ ಪ್ರತಿಜ್ಞಾ ದಿನ ಸಮಾರಂಭ ನಡೆಯಿತು. ಈ ವೇಳೆ ಜಿಲ್ಲಾ ಕಾಂಗ್ರೆಸ್ ನಾಯಕರು ದೀಪ ಬೆಳಗಿಸುವ ಮೂಲಕ ಜಿಲ್ಲೆಯಲ್ಲಿ ಚಾಲನೆ ನೀಡಿದರು. ಅಲ್ಲದೆ ಸಂವಿಧಾನದ ಪೀಠಿಕೆಯ ಮೇಲೆ ಪ್ರಮಾಣವಚನ ಹಾಗೂ ಕಾಂಗ್ರೆಸ್ ಪಕ್ಷದ ಧ್ಯೇಯಗಳ ಮೇಲೆ ಪ್ರತಿಜ್ಞೆ ಮಾಡಲಾಯಿತು.
ಈ ವೇಳೆ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ ಭಂಡಾರಿ, ಯು.ಆರ್. ಸಭಾಪತಿ, ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್ ಅಮೀನ್, ಅಮೃತಾ ಕೃಷ್ಣಮೂರ್ತಿ, ದಿವಾಕರ ಶೆಟ್ಟಿ, ವೈ ಸುಕುಮಾರ್, ಕಬೀರ್ ಸಾಹೆಬ್, ಪ್ರಭಾಕರ ಆಚಾರ್ಯ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.