ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ -19 ಪಾಸಿಟಿವ್

Spread the love

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ -19 ಪಾಸಿಟಿವ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ, ಅವರು ಚಿಕಿತ್ಸೆಗಾಗಿ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಅವರು ಸುಗುಣ ಆಸ್ಪತ್ರೆಗೆ ತೆರಳಿ ಕೋವಿಡ್ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಪಾಸಿಟಿವ್ ವರದಿ ಬಂದಿದ್ದು, ಹೀಗಾಗಿ ಅದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಶಿವಕುಮಾರ್ ಅವರ ಆಪ್ತ ಮೂಲಗಳು ತಿಳಿಸಿವೆ.

ಕೆಲವು ದಿನಗಳಿಂದ ಅವರು ತೀವ್ರ ಬೆನ್ನು ನೋವಿನ ಬಳಲುತ್ತಿದ್ದರು. ಹೀಗಾಗಿ, ಪ್ರವಾಸ ಮುಂದೂಡಿ, ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ವಿಶ್ರಾಂತಿಯಲ್ಲಿ ಪಡೆಯುತ್ತಿದ್ದರು.

ಅದಕ್ಕೂ ಹಿಂದೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅವರು ಗುಣಮುಖರಾಗಿದ್ದಾರೆ


Spread the love