ಕೆ.ಎಮ್.ಸಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ಚಿತ್ರದುರ್ಗ ಮೂಲದ ಯುವತಿಗೆ ಕೊರೋನಾ ಪಾಸಿಟವ್ ದೃಢ
ಉಡುಪಿ: ಮಣಿಪಾಲದ ಕೆ.ಎಮ್.ಸಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಚಿತ್ರದುರ್ಗ ಮೂಲದ 17 ವರ್ಷ ವಯಸ್ಸಿನ ಯುವತಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.
ಮೇ 16ರಂದು ಮಣಿಪಾಲ ಕೆ ಎಮ್ ಸಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ P-1290 ಯುವತಿಗೆ ಕೋವಿಡ್ ಪರೀಕ್ಷೆ ನಡೆಸಿದ ಸಮಯದಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ರಾಜ್ಯದ ಹೆಲ್ತ್ ಬುಲೆಟಿನ್ ನಲ್ಲಿ ಚಿತ್ರದುರ್ಗ ಜಿಲ್ಲೆಯ ಯುವತಿಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ನೀಡಲಾಗಿದೆ.
ಕೋವಿಡ್ ಪಾಸಿಟಿವ್ ಆಗಿರುವ ಯುವತಿಯನ್ನು ಜಿಲ್ಲೆಯ ಟಿ ಎಮ್ ಪೈ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸುವ ಸಾಧ್ಯತೆ ಇದ್ದು , ಇದರೊಂದಿಗೆ ಉಡುಪಿಯಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ 16 ಕ್ಕೆ ಏರಿಕೆ ಆಗಲಿದೆ.