Spread the love
ಕೇಂದ್ರ ಸರಕಾರದ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ನಿಂದ ಪ್ರತಿಭಟನೆ: ಬಂಧನ
ಮಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ಗೆ ಜಾರಿ ನಿರ್ದೇಶನಾಲಯ (ಈಡಿ) ಹಾಗೂ ಆದಾಯ ತೆರಿಗೆ ಇಲಾಖೆ ಅನಗತ್ಯ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾನಿರತರು ಕೇಂದ್ರ ಸರಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆ ತಡೆಗೆ ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಮಿಥುನ್ ರೈ ಸೇರಿದಂತೆ ನಾಯಕರನ್ನು ವಶಕ್ಕೆ ಪಡೆದರು. ಬಳಿಕ ಅಲ್ಲಿದ್ದ ಇತರ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಯನ್ನು ಕೆಲ ನಿಮಿಷಗಳ ಕಾಲ ಮುಂದುವರಿಸಿದರು.
ಪ್ರತಿಭಟನೆಯಲ್ಲಿ ನಾಯಕರಾದ ಪ್ರವೀಣ್ ಚಂದ್ರ ಆಳ್ವ, ಪ್ರವೀಣ್ ಕುವೆಲ್ಲೋ, ಸುಹೇಲ್ ಕಂದಕ್ ಮೊದಲಾದವು ಭಾಗವಹಿಸಿದ್ದರು.
Spread the love