ಕೈ ತೊರೆದು ಕಮಲ ಹಿಡಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನೀಲ್
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕಾಂಗ್ರೆಸ್ನ ಕವಿತಾ ಸನಿಲ್ ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕವಿತಾ ಸನಿಲ್ ಅವರಿಗೆ ಬಿಜೆಪಿ ಧ್ವಜ ನೀಡಿ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ ಸ್ವಾಗತಿಸಿದರು.
ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ತಾನು ಬಿಜೆಪಿ ಸೇರ್ಪಡೆಯಾಗಿರುವುದಾಗಿ ಕವಿತಾ ಸನಿಲ್ ತಿಳಿಸಿದ್ದಾರೆ.
ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಅಗತ್ಯವಿದೆ. ಅವರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಸೇರ್ಪಡೆಯಾಗಿರುವುದಾಗಿ ಹೇಳಿದ್ದಾರೆ.