Home Mangalorean News Kannada News ಕೊಣಾಜೆ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಕೊಣಾಜೆ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

Spread the love
RedditLinkedinYoutubeEmailFacebook MessengerTelegramWhatsapp

ಕೊಣಾಜೆ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
 
ಮಂಗಳೂರು: ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ನಡೆದ ಮೂರು ಮನೆಗಳಿಗೆ ನುಗ್ಗಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ‌ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಜೇಶ್ವರದ ಶಿಹಾಬ್, ಬಜ್ಪೆಯ ಅರ್ಫ್ರಾಝ್, ಸಫ್ವಾನ್ ಮತ್ತು ಜಂಶೀರ್ ಎಂದು ಗುರುತಿಸಲಾಗಿದೆ‌.

ಕೊಣಾಜೆ ಪೊಲೀಸರು ಮುದುಂಗಾರುಕಟ್ಟೆಯ ಚೆಕ್‌ಪೋಸ್ಟ್‌ನಲ್ಲಿ ಜು. 10ರಂದು ರಾತ್ರಿ ತಪಾಸಣೆ ಮಾಡುತ್ತಿದ್ದಾಗ ಕಾರಿನಲ್ಲಿದ್ದ ಮೂವರನ್ನು ಸಂಶಯದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ‌. ಈ ಆರೋಪಿಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈ ತಂಡದ ಪ್ರಮುಖ ಆರೋಪಿ ಅಶ್ರಫ್ ಅಲಿಯನ್ನು ಕುಂಬಳೆ ಪೊಲೀಸರು ಈಗಾಗಲೆ ಬಂಧಿಸಿದ್ದಾರೆ ಎಂದು ಅನುಪಮ್ ಅಗರ್ವಾಲ್ ಹೇಳಿದ್ದಾರೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version