Home Mangalorean News Kannada News ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಕೋರರಿಗೆ ಕಠಿಣ ಶಿಕ್ಷೆ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಮ್ಮತಿ

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಕೋರರಿಗೆ ಕಠಿಣ ಶಿಕ್ಷೆ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಮ್ಮತಿ

Spread the love

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಕೋರರಿಗೆ ಕಠಿಣ ಶಿಕ್ಷೆ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಮ್ಮತಿ

ಬೆಂಗಳೂರು: ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ನಿಯಂತ್ರಣಕ್ಕಾಗಿ ಹೋರಾಟ ಮಾಡುತ್ತಿರುವ ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತೆಯರು, ಪೊಲೀಸರು, ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದರೆ ಅವರಿಗೆ ಮೂರು ವರ್ಷಗಳ ಕಠಿಣ ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತ ಹಾಕಿದ್ದಾರೆ.

ಕೊರೊನಾ ವಾರಿಯರ್ಸ್ ಮತ್ತು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವ ಪುಂಡರನ್ನು ಮಟ್ಟ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜೂಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಾರ್ವಜನಿಕರ ಆಸ್ತಿ ನಷ್ಟ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದ್ದು, ಒಂದು ವೇಳೆ ಪುಂಡರ ಹೆಸರಿನಲ್ಲಿ ಆಸ್ತಿ ಇಲ್ಲದಿದ್ದರೆ ಜೈಲು ಶಿಕ್ಷೆ ಹಾಗೂ ಭಾರೀ ದಂಡ ವಿಧಿಸುವ ಮಹತ್ವದ ತೀರ್ಮಾನವನ್ನು ಸುಗ್ರೀವಾಜ್ಞೆ ಒಳಗೊಂಡಿದೆ.

ಕೇರಳ ಮತ್ತು ಉತ್ತರ ಪ್ರದೇಶದಲ್ಲಿ ಈ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿತ್ತು. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಕೂಡ ಈ ಕಾಯ್ದೆಯನ್ನು ಜಾರಿಗೊಳಿಸಲು ನಿರ್ಧರಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು.

ಪಾದರಾಯನಪುರ ಮತ್ತು ಸಾದಿಕ್ ಪಾಳ್ಯದಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ನಿನ್ನೆ ನಡೆಸ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ತರಲು ನಿರ್ಧರಿಸಲಾಗಿತ್ತು.


Spread the love

Exit mobile version