ಕೊರೋನಾ ಸಮಸ್ಯೆಯನ್ನು ನಿಭಾಯಿಸುವಲ್ಲಿ ದ.ಕ.ಜಿಲ್ಲಾಡಳಿತ ಸಂಪೂರ್ಣ ವಿಫಲ, ಬಿ.ಜೆ.ಪಿ.ನಾಯಕರ ಕೈಗೊಂಬೆಯಂತೆ ಕಾರ್ಯ ನಿರ್ವಹಣೆ — ಶೌವಾದ್ ಗೂನಡ್ಕ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಉಸ್ತುವಾರಿ ಸಚಿವರು, ಜಿಲ್ಲೆಯ ಸಂಸದರು ಹಾಗೂ ಬಿ.ಜೆ.ಪಿ.ಶಾಸಕರು ಬಿಡುತ್ತಿಲ್ಲ..ಈಗಾಗಲೇ ಫಸ್ಟ್ ನ್ಯೂರೋ ಆಸ್ಪತ್ರೆಯ ಕೊರೋನಾ ಮೂಲವನ್ನು ಕಂಡುಹಿಡಿಯಲು ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ ಅದೇ ರೀತಿ ಯು.ಎ.ಇ.ಯಿಂದ ಬಂದಂತಹ ಭಾರತೀಯರಿಗೆ ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸಲು ಜಿಲ್ಲಾಡಳಿತ ವಿಫಲವಾಗಿದೆ. ವೃದ್ಧರು, ಗರ್ಭಿಣಿಯರು ಹಾಗೂ ರೋಗಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ತೀವ್ರ ತೊಂದರೆಯನ್ನು ಅನುಭವಿಸಿದ್ದು ಜಿಲ್ಲೆಯ ಬಿ.ಜೆ.ಪಿ.ನಾಯಕರು ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುತ್ತಿಲ್ಲ ಸಮಸ್ಯೆಯನ್ನು ಹುಟ್ಟುಹಾಕುತ್ತಿದ್ದಾರೆಂದು ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಶೌವಾದ್ ಗೂನಡ್ಕರವರು ಹೇಳಿದ್ದಾರೆ.
ವಿಮಾನದಲ್ಲಿ ಕರೆದುಕೊಂಡು ಬರುವುದು ಮಾತ್ರ ಸರ್ಕಾರದ ಕೆಲಸವಲ್ಲ ಬಂದವರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಜಿಲ್ಲಾಡಳಿತದ ಕೆಲವು ನೀತಿ ನಿಯಮಗಳು ಹಾಗೂ ನಿರ್ಧಾರಗಳನ್ನು ಗಮನಿಸುವ ವೇಳೆ ಮೇಲ್ನೋಟಕ್ಕೆ ಬಿ.ಜೆ.ಪಿ.ನಾಯಕರ ಹಸ್ತಕ್ಷೇಪವಿದ್ದಂತೆ ಕಂಡುಬರುತ್ತದೆ..ಜಿಲ್ಲೆಯ ದೊಡ್ಡ ದೊಡ್ಡ ಉದ್ಯಮಿಗಳ ಹಿತಾಸಕ್ತಿಗಾಗಿ ಬಿ.ಜೆ.ಪಿ.ನಾಯಕರು ಜನಸಾಮಾನ್ಯರನ್ನು ಅಡಕತ್ತರಿಯಲ್ಲಿ ಸಿಲುಕಿಸುತ್ತಿದ್ದಾರೆ. ಇಂತಹ ಆಡಳಿತ ವರ್ಗದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ರಾಜ್ಯ ಸರ್ಕಾರವು ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಶೌವಾದ್ ಗೂನಡ್ಕರವರು ಆಗ್ರಹಿಸಿದ್ದಾರೆ.