Home Mangalorean News Kannada News ಕೊರೋನಾ ಸೊಂಕಿಗೆ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಬಲಿ – ಕೊಲ್ಲೂರಿನ ವ್ಯಕ್ತಿ ಸಾವು

ಕೊರೋನಾ ಸೊಂಕಿಗೆ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಬಲಿ – ಕೊಲ್ಲೂರಿನ ವ್ಯಕ್ತಿ ಸಾವು

Spread the love

ಕೊರೋನಾ ಸೊಂಕಿಗೆ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಬಲಿ – ಕೊಲ್ಲೂರಿನ ವ್ಯಕ್ತಿ ಸಾವು

ಉಡುಪಿ: ಕೊರೋನಾ ಸೋಂಕಿಗೆ ಉಡುಪಿ ಜಿಲ್ಲೆಯಲ್ಲಿ ಶನಿವಾರ ಮತ್ತೊಂದು ಬಲಿಯಾಗಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.

ಕೊಲ್ಲೂರಿನ 45 ವರ್ಷ ಪ್ರಾಯದ ವ್ಯಕ್ತಿಯೋರ್ವರು ಶ್ವಾಸಕೋಶದ ಕ್ಯಾನ್ಸರ್ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಅವರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಕೂಡಲೇ ಅವರನ್ನು ಉಡುಪಿ ಟಿ.ಎಂ ಎಪೈ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಿದ್ದು ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಮೃತ ವ್ಯಕ್ತಿಯ ಅಂತ್ಯಕ್ರಿಯೆ ಇಂದು ಕೊಲ್ಲೂರಿನಲ್ಲಿ ಕೋವಿಡ್-19 ಮಾರ್ಗಸೂಚಿಯಂತೆ ನಡೆಯಿತು ಎಂದು ತಿಳಿದುಬಂದಿದೆ.


Spread the love

Exit mobile version