ಕೊರೋನಾ ಸೋಂಕಿಗೆ ದಕ ಜಿಲ್ಲೆಯಲ್ಲಿ ಮತ್ತೆರಡು ಬಲಿ – ಸಾವಿನ ಸಂಖ್ಯೆ 24ಕ್ಕೆ ಏರಿಕೆ
ಮಂಗಳೂರು: ಕೊರೋನಾ ಮಹಾ ಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಸೋಮವಾರ ಮತ್ತಿಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.
ಸೋಮವಾರ ಬೆಳಿಗ್ಗೆ ಉಳ್ಳಾಲದ 50 ವರ್ಷದ ನಿವಾಸಿ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇನ್ನೊರ್ವ 52 ವರ್ಷದ ಕುತ್ತಾರ್ ನಿವಾಸಿ ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದು ಅವರೂ ಕೂಡ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.