ಕೋರೊನಾದಿಂದ ಸಿಎಮ್ ಯಡಿಯೂರಪ್ಪ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಸೋಮವಾರ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದರು.
ಆಗಸ್ಟ್ 2 ರ (ಭಾನುವಾರ) ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್-19 ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕು ಲಕ್ಷಣಗಳು ಯಡಿಯೂರಪ್ಪ ಅವರಲ್ಲಿ ಕಾಣಿಸಿರಲಿಲ್ಲ. ಆದರೆ, ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯಂತೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಯಡಿಯೂರಪ್ಪ ಅವರ ಕಾರು ಚಾಲಕನಿಗೆ ಹಾಗೂ ಅವರ ಅಡುಗೆ ಸಿಬ್ಬಂದಿಯೊಬ್ಬರು ಈ ಹಿಂದೆ ಕೋವಿಚ್ ದೃಢಪಟ್ಟಿತ್ತು. ಆಗ ಪರೀಕ್ಷೆ ಮಾಡಿಸಿದ್ದಾಗ ಮುಖ್ಯಮಂತ್ರಿಗೆ ಸೋಂಕು ದೃಢಪಟ್ಟ ಇರಲಿಲ್ಲ. ಮುಖ್ಯಮಂತ್ರಿ ಸಿಬ್ಬಂದಿಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರ ಗೃಹ ಕಚೇರಿ ಕಾವೇರಿ ಹಾಗೂ ಡಾಲರ್ಸ್ ಕಾಲೊನಿಯ ಧವಳಗಿರಿ ನಿವಾಸವನ್ನು ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಲಾಗಿತ್ತು