ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಶಾಸಕ ಭರತ್ ಶೆಟ್ಟಿ
ಮಂಗಳೂರು: ಕೋವಿಡ್ -19 ಸೋಂಕು ದೃಢಗೊಂಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅವರು ಸಂಪೂರ್ಣ ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಈ ಕುರಿತು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ದೇವರ ಆಶೀರ್ವಾದ ಮತ್ತು ನಿಮ್ಮೆಲ್ಲರ ಶುಭ ಹಾರೈಕೆಗಳಿಂದ ಕೋರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದೇನೆ ಎಂದು ಹೇಳಿದ್ದಾರೆ.
ಮುಂದಿನ 10 ದಿನಗಳ ಕಾಲ ಕ್ವಾರಂಟೈನ್ ಅಲ್ಲಿ ಇರಲಿದ್ದು ಅದರ ಬಳಿಕ ಮತ್ತೆ ಪುನಃ ಕ್ಷೇತ್ರದ ಕೆಲಸಗಳಲ್ಲಿ ತೊಡಗಿಕೊಳ್ಳುವೆ. ಎಲ್ಲರೂ ಸುರಕ್ಷಿತವಾಗಿರಿ. ಕೋವಿಡ್ ವಿರುದ್ದ ಜೊತೆಯಾಗಿ ಹೋರಾಟ ಮಾಡೋಣ ಎಂದು ಹೇಳಿದ್ದಾರೆ.