Home Mangalorean News Kannada News ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯ ಬಂಧನ

Spread the love

ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬರ್ಕೆ ಠಾಣಾ ವ್ಯಾಪ್ತಿಯ ಬೋಳೂರು ಮಿಶನ್ ಕಂಪೌಂಡ್ ನ ಒಂದು ಮನೆಯ ಬಳಿಯಲ್ಲಿ ಸುದೇಶ್ ಎಂಬವರು cricket exchange ಎಂಬ Mobile App ನಲ್ಲಿ ನ್ಯೂಜಿಲ್ಯಾಂಡ್ ಮತ್ತು ದಕ್ಷಿಣ ಆಪ್ರಿಕಾ ನಡುವೆ ಇಂಗ್ಲೇಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್ ಪಂದ್ಯಕ್ಕೆ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಬಂದಂತೆ ಭಾತ್ಮೀದಾರರು ತಿಳಿಸಿದ ಸ್ಥಳಕ್ಕೆ ದಾಳಿ ನಡೆಸಿ ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದ ಸುದೇಶ್ ಎಂಬಾತನನ್ನು ವಿಚಾರಿಸಿ ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಗೆ ಉಪಯೋಗಿಸುತ್ತಿದ್ದ ಮೊಬೈಲ್, ಆತನು ಸಾರ್ಜನಿಕರಿಂದ ಅಕ್ರಮ ಬೆಟ್ಟಿಂಗ್ ದಂಧೆಗೆ ಸಂಗ್ರಹಿಸಿದ್ದ ಹಣವನ್ನು ಪಂಚರ ಸಮಕ್ಷಮ ಸ್ವಾಧೀನಪಡಿಸಿಕೊಂಡು ಆತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವಲ್ಲಿ ಯಶಸ್ವೀಯಾಗಿರುತ್ತಾರೆ.

ಬಂಧಿತ ಆರೋಪಿಯನ್ನು ಮಂಗಳೂರು ಬೋಳೂರು ಮಿಷನ್ ಕಂಪೌಂಡ್ ನಿವಾಸಿ ಸುದೇಶ್ (26) ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಮೊಬೈಲ್ ಫೋನ್ ಸೇರಿದಂತೆ ಒಟ್ಟು ರೂ 1.15 ಲಕ್ಷ ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಐ.ಪಿ.ಎಸ್. ಇವರ ನಿರ್ದೇಶನದಂತೆ ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರುಗಳಾದ ಹನುಮಂತರಾಯ ಐ.ಪಿ.ಎಸ್. (L&O) ಮತ್ತು ಲಕ್ಷ್ಮೀ ಗಣೇಶ್ (Crime & Traffic) ಇವರ ಮಾರ್ಗದರ್ಶನದಂತೆ ಮಂಗಳೂರು ನಗರ ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಸುಧೀರ್ ಹೆಗಡೆ, ಬರ್ಕೆ ಠಾಣಾ ನಿರೀಕ್ಷಕರಾದ ಪಿ ಎ ಸೂರಜ್ ಮಂಗಳೂರು ರವರ ಮಾರ್ಗದರ್ಶನ ದಲ್ಲಿ ಬರ್ಕೆ ಠಾಣಾ ಪಿಎಸ್ ಐ ರಾಜಾರಾಮ್ ಮತ್ತು ಸಿಬ್ಬಂದಿಗಳಾದ ಮಹೇಶ್ ಪಾಟೀಲ,ಕೃಷ್ಣಪ್ಪ ನಂದ್ಯಾಲ್,ನಾಗರಾಜ ಚಂದರಗಿ ಮತ್ತು ಕುಮಾರ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.


Spread the love

Exit mobile version