Home Mangalorean News Kannada News ಕ್ರೈಸ್ತ ಅಭಿವೃದ್ಧಿ ನಿಗಮ ರಚಿಸಲು ಮುಖ್ಯಮಂತ್ರಿಗೆ ಮನವಿ

ಕ್ರೈಸ್ತ ಅಭಿವೃದ್ಧಿ ನಿಗಮ ರಚಿಸಲು ಮುಖ್ಯಮಂತ್ರಿಗೆ ಮನವಿ

Spread the love

ಕ್ರೈಸ್ತ ಅಭಿವೃದ್ಧಿ ನಿಗಮ ರಚಿಸಲು ಮುಖ್ಯಮಂತ್ರಿಗೆ ಮನವಿ

ಉಡುಪಿ: ಕ್ರೈಸ್ತ ಅಭಿವೃದ್ಧಿ ಪರಿಷತ್ ನಿಗಮವನ್ನಾಗಿ ಮಾರ್ಪಾಡು ಮಾಡುವಂತೆ ಆಗ್ರಹಿಸಿ ಕರ್ನಾಟಕ ಕ್ರೈಸ್ತರ ಹಕ್ಕುಗಳ ಸಂಘಟನೆ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಸಂಘಟನೆಯ ವತಿಯಿಂದ ಸುಮಾರ 1500ಕ್ಕೂ ಅಧಿಕ ಪಾಸ್ಟರ್ಗಳು ಮತ್ತು ಪ್ರಮುಖ ಮುಖಂಡರು ಕರ್ನಾಟಕ ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಸಮಾವೇಶಗೊಂಡು ಮುಖ್ಯಮಂತ್ರಿಯನ್ನು ಭೇಟಿಯಾದರು.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಈ ಬಗ್ಗೆ ಮುಂದಿನ ಬಜೆಟಿನಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಮತ್ತು ಕ್ರೈಸ್ತ ಸಮುದಾಯಕ್ಕಾಗಿ ನೀಡಿದ ಅನುದಾನವನ್ನು ಸದ್ಬಳಕೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯದಲ್ಲಿ ಕ್ರೈಸ್ತ ಸಮುದಾಯಕ್ಕೆ ರಾಜಕೀಯವಾಗಿ ಸಬಲಗೊಳಿಸಲು ಮುಂದಿನ 2018 ನೇ ಸಾಲಿನ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕನಿಷ್ಠ ಏಳು ಸ್ಥಾನಗಳನ್ನು  ವಿಧಾನಸಭೆಯಲ್ಲಿ ಸ್ಪರ್ಧಿಸಲು ಅವಕಾಶವನ್ನು ನೀಡಬೇಕು ಎಂಬ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮುಂದಿನ ದಿನಗಳಲ್ಲಿ ಪಕ್ಷದ ಉನ್ನತ ನಾಯಕರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ನಿಯೋಗದಲ್ಲಿ ಒಕ್ಕೂಟದ ರಾಜ್ಯಧ್ಯಕ್ಷ ಪಾಸ್ಟರ್ ರಾಜಶೇಖರ್, ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ಪದಾಧಿಕಾರಿಗಳಾದ ಆನಂದ್, ಪೀಟರ್ ದಾಂತಿ, ಮರಿಯಪ್ಪ, ಏಸುದಾಸ್, ಜೊಸೇಫ್ ಜಮಖಂಡಿ, ಪಾಸ್ಟರ್ ಜಾನ್ಸನ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ನಿಯೋಗ ಇದೇ ವಿಚಾರದಲ್ಲಿ ಶಾಸಕ ಜೆ ಆರ್ ಲೋಬೊ ಅವರನ್ನು ಕೂಡ ಭೇಟಿ ಮಾಡಿ ಮನವಿ ಸಲ್ಲಿಸಿತು.


Spread the love

Exit mobile version