Spread the love
ಖಲೀಲ್ ಎಂಬಾತ ಪಾಪ್ಯುಲರ್ ಫ್ರಂಟ್ ಸದಸ್ಯನಲ್ಲ : ನವಾಝ್ ಉಳ್ಳಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಮತೀಯ ಗಲಭೆಗಳಿಗೆ ಕಾರಣವಾಗುತ್ತಿರುವ ಆರೋಪದ ಮೇಲೆ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದ ನಿವಾಸಿಗಳಾದ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಮತ್ತು ಖಲೀಲ್ ಎಂಬುವವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ ಆದರೆ ಕೆಲವೊಂದು ಮಾದ್ಯಮಗಳಲ್ಲಿ ಖಲೀಲ್ ಎಂಬಾತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡ ಖಲೀಲ್ ಎಂದು ಬರುತ್ತಿದ್ದು ಖಲೀಲ್ ಎಂಬವನು ಪಾಪ್ಯುಲರ್ ಫ್ರಂಟ್ ಸಾಮಾನ್ಯ ಕಾರ್ಯಕರ್ತನು ಕೂಡ ಅಲ್ಲ ಎಂದು ದ.ಕ ಜಿಲ್ಲಾದ್ಯಕ್ಷ ನವಾಝ್ ಉಳ್ಳಾಲ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
Spread the love