ಗಾಂಜಾ ಸೇವನೆ ಮತ್ತು ಮಾರಾಟ ; ಇಬ್ಬರ ಬಂಧನ

Spread the love

ಗಾಂಜಾ ಸೇವನೆ ಮತ್ತು ಮಾರಾಟ ; ಇಬ್ಬರ ಬಂಧನ

ಮಂಗಳೂರು: ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಕೊನಾಮಿಕ್ ಆ್ಯಂಡ್ ನಾರ್ಕೋಟಿಕ್ ಕ್ರೈಂ ಠಾಣಾ ಪೋಲಿಸರು ಶನಿವಾರ ಬಂಧಿಸಿದ್ದಾರೆ.

ಬಂಧಿತರನ್ನು ಗಾಂಜಾ ಸೇವನೆ ಮಾಡುತ್ತಿದ್ದ ತಲಪಾಡಿಯ ಎಸ್.ಕೆ. ಮನ್ಸೂರ್ ಹಾಗೂ ಮಾರಾಟ ಮಾಡುತ್ತಿದ್ದ ಹೆನ್ರಿ ಬಾಲ ಯಾನೆ ಬಾಲಕೃಷ್ಣ ಪೂಜಾರಿ ತಲಪಾಡಿ ಎಂದು ಗುರುತಿಸಲಾಗಿದೆ.

ಆರೋಪಿಗಳ ಪೈಕಿ ಬಾಲಕೃಷ್ಣ ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪೊಳಲಿ ಕಮಲಾಕ್ಷ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಈ ಹಿಂದೆ ಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ದೃವ್ಯ ಚರಸ್ ಮಾರಾಟ ಪ್ರಕರಣದ ಆರೋಪಿಯಾಗಿದ್ದಾನೆ. ಆರೋಪಿಗಳನ್ನು ನಗರದ ಹೊರವಲಯದ ತಲಪಾಡಿ ಟೋಲ್ ಗೇಟ್ ಬಳಿ ಬಂಧಿಸಲಾಗಿದೆ. ಆರೋಪಿಗಳಿಂದ 110 ಗ್ರಾಂ ಗಾಂಜಾ ಮತ್ತು ಗಾಂಜಾ ಮಾರಾಟ ಮಾಡಿದ ರೂ 400 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಪೋಲಿಸ್ ಆಯುಕ್ತ ಟಿ.ಆರ್. ಸುರೇಶ್ ಅವರ ಆದೇಶದಂತೆ ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಅವರ ನಿರ್ದೇಶನದಲ್ಲಿ ಪೋಲಿಸ್ ನಿರೀಕ್ಷಕ ಮಹಮ್ಮದ್ ಶರೀಫ್, ಸಿಬಂದಿಗಳಾದ ಜಗದೀಶ್, ಶಾಜು ನಾಯರ್, ಕಿಶೋರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love