Home Mangalorean News Kannada News ‘ಗಿರಿಗಿಟ್’ ತುಳು ಚಲನಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ

‘ಗಿರಿಗಿಟ್’ ತುಳು ಚಲನಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ

Spread the love

‘ಗಿರಿಗಿಟ್’ ತುಳು ಚಲನಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ

ಮಂಗಳೂರು: ಇತ್ತೀಚೆಗೆ ಬಿಡುಗಡೆಗೊಂಡು ನಗರದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿರುವ ತುಳು ಚಲನಚಿತ್ರ ‘ಗಿರಿಗಿಟ್’ ಪ್ರದರ್ಶನ ಮಾಡದಂತೆ ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಲಯ ಗುರುವಾರ ತಡೆಯಾಜ್ಞೆ ವಿಧಿಸಿದೆ.

ಚಿತ್ರದಲ್ಲಿನ ನ್ಯಾಯಾಲಯದ ದೃಶ್ಯವೊಂದರಲ್ಲಿ ನಟ ಅರವಿಂದ ಬೋಳಾರ್ ವಕೀಲರ ಪಾತ್ರ ನಿರ್ವಹಿಸಿದ್ದು, ಅದರಲ್ಲಿ ಐಪಿಸಿ ಸೆಕ್ಷನ್, ನ್ಯಾಯಧೀಶರನ್ನು ಹಾಗೂ ನ್ಯಾಯಾಲಯವನ್ನು ಅಣಕಿಸಿದ ಮತ್ತು ವಕೀಲರ ವೃತ್ತಿಯನ್ನು ಹಾಸ್ಯಮಯವಾಗಿ ತೋರಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ವಕೀಲರ ಸಂಘ ನ್ಯಾಯಾಲಯ ಮೆಟ್ಟಿಲೇರಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಲಯದ ಕಿರಿಯ ನ್ಯಾಯಾಧೀಶ ಹರೀಶ್ ಗಿರಿಗಿಟ್ ಚಲನಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

 

 


Spread the love
1 Comment
Inline Feedbacks
View all comments
Henry James
5 years ago

Show the disclaimer at the end of the movie stating:

“This was a Work of fiction. Names, characters, businesses, places, events and incidents portrayed in this movie were either the products of the screenwriter’s imagination or used in a fictitious manner for comical effect. Any resemblance to actual persons or their professions, living or dead, or actual events was purely coincidental”

No law can then stop the film from screening.

wpDiscuz
Exit mobile version