ಗುರುವಾಯನಕೆರೆ: ಡಿವೈಡರ್‌ಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

Spread the love

ಗುರುವಾಯನಕೆರೆ: ಡಿವೈಡರ್‌ಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31) ಮೃತಪಟ್ಟವರು.

ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments