ಗೇರು ವಿಸ್ತರಣೆ: ರೈತರಿಂದ ಅರ್ಜಿ ಆಹ್ವಾನ
ಮ0ಗಳೂರು : ಗೇರು ಪ್ರದೇಶ ವಿಸ್ತರಣೆಗೆ ಆಸಕ್ತಿ ಇರುವ ರೈತರಿಗೆ 2017-18 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಗೇರು ಅಭಿವೃದ್ಧಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಈ ಚಟುವಟಿಕೆ ಕೈಗೊಳ್ಳುವ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಗೇರು ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಸಾಮಾನ್ಯ ರೈತರಿಗೆ ಒಟ್ಟು ಘಟಕದ ಶೇ. 50 ರಂತೆ ಪ್ರತೀ ಹೆಕ್ಟೇರ್ಗೆ ಗರಿಷ್ಟ ರೂ. 26,050/- ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಂತೆ ಪ್ರತೀ ಹೆಕ್ಟೇರ್ಗೆ ಗರಿಷ್ಟ ರೂ. 46,890/- ಸಹಾಯಧನ ನೀಡಲಾಗುತ್ತದೆ. ಪ್ರತಿ ಫಲಾನುಭವಿಗಳಿಗೆ 1 ಎಕರೆಯಿಂದ 5 ಎಕರೆವರೆಗೆ ಸಹಾಯಧನ ಒದಗಿಸಲಾಗುತ್ತದೆ. ಆಸಕ್ತ ರೈತರು ಅರ್ಜಿ ನಮೂನೆ, ಭಾವ ಚಿತ್ರ, ಪಹಣಿ ಪತ್ರಗಳೊಂದಿಗೆ ಸಂಬಂಧಪಟ್ಟ ತಾಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಅಥವಾ ಆಯಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಯವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30. ಹೆಚ್ಚಿನ ಮಾಹಿತಿಗೆ ಆಯಾ ತಾಲೂಕು ತೋಟಗಾರಿಕೆ ಇಲಾಖಾ ಕಛೇರಿಯನ್ನು ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.