Home Mangalorean News Kannada News ಗ್ಯಾಂಗ್ ರೇಪ್ ಪ್ರಕರಣ: ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ- ಸಚಿವ...

ಗ್ಯಾಂಗ್ ರೇಪ್ ಪ್ರಕರಣ: ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ- ಸಚಿವ ಯು.ಟಿ. ಖಾದರ್

Spread the love

ಗ್ಯಾಂಗ್ ರೇಪ್ ಪ್ರಕರಣ: ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ- ಸಚಿವ ಯು.ಟಿ. ಖಾದರ್

ಮಂಗಳೂರು: ತೋಟ ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ನಾಗರಿಕರ ವತಿಯಿಂದ ಒಂದು ಲಕ್ಷ ರೂ. ಮೊತ್ತವನ್ನು ಬಹುಮಾನವಾಗಿ ನೀಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ದೂರು ಬಾರದಿದ್ದರೂ, ಪ್ರಕರಣದ ಮಾಹಿತಿ ದೊರೆತ ತಕ್ಷಣವೇ ಪೊಲೀಸರು ಸ್ವಯಂಪ್ರೇರಿತ ವಾಗಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದು ಪ್ರಶಂಸನೆಗೆ ಪಾತ್ರವಾಗಿದೆ. ಇದಕ್ಕಾಗಿ ಪೊಲೀಸರನ್ನು ಅಭಿನಂಧಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಸಂತ್ರಸ್ತ ಯುವತಿಗೆ ರಾಜ್ಯ ಸರಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಬೆಂಗ್ರೆ ಪ್ರದೇಶದಲ್ಲಿ ಪೊಲೀಸ್ ಔಟ್ ಪೋಸ್ಟ್ ತೆರೆಯಲು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಇಂತಹ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳ ಪರ ಯಾವುದೇ ನ್ಯಾಯವಾದಿಗಳು ವಾದಿಸಲು ಮುಂದೆ ಬಾರದೆ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


Spread the love

Exit mobile version