ಚಿಕ್ಕಮಗಳೂರು: ಸಖರಾಯಪಟ್ಟಣ ಠಾಣೆಯ ನೂತನ ಠಾಣಾಧಿಕಾರಿಯಾಗಿ ಹರೀಶ್ ಆರ್ ಅಧಿಕಾರ ಸ್ವೀಕಾರ
ಚಿಕ್ಕಮಗಳೂರು: ಜಿಲ್ಲೆಯ ಸಖರಾಯಪಟ್ಟಣದ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಹರೀಶ್ ಆರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಉಡುಪಿ ಜಿಲ್ಲೆಯ ಕುಂದಾಪುರ ನಗರ ಠಾಣೆಯ ಠಾಣಾಧಿಕಾರಿಯಾಗಿದ್ದ ಹರೀಶ್ ಆರ್ ಅವರನ್ನು ಇಲಾಖೆ ಅಗಸ್ಟ್ 24ರಂದು ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪೊಲೀಸ್ ಠಾಣೆಗೆ ಠಾಣಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶ ಮಾಡಿತ್ತು.
ಈ ಮೊದಲು ಸಖರಾಯಪಟ್ಟಣ ಠಾಣಾಧಿಕಾರಿಯಾಗಿದ್ದ ಮೌನೇಶ್ ಅವರನ್ನು ಚಿಕ್ಕಮಗಳೂರು ನಗರ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಕುಂದಾಪುರ ನಗರ ಠಾಣೆಯಲ್ಲಿ ಹರೀಶ್ ಅವರಿಂದ ತೆರವಾದ ಸ್ಥಾನಕ್ಕೆ ಉಡುಪಿ ನಗರ ಠಾಣೆಯ ಸದಾಶಿವ ರಾಮಪ್ಪ ಗವರೋಜಿ ಅವರನ್ನು ನೇಮಕಮಾಡಲಾಗಿದೆ.
ತನ್ನ ಎರಡುವರೆ ವರ್ಷಗಳ ಅವಧಿಯಲ್ಲಿ ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಉತ್ತಮ ಕಾರ್ಯನಿರ್ವಹಿಸಿದ್ದ ಹರೀಶ್ ಆರ್ ಅವರು ಹಿರಿಯ ಅಧಿಕಾರಿಗಳು ಸಿಬಂದಿಗಳ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅಲ್ಲದೆ ಅಪರಾಧ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಕೂಡ ಪ್ರಮುಖ ಆದ್ಯತೆ ನೀಡಿದ್ದರು.