ಚಿನ್ನಾಭರಣ ಕಳವು ಪ್ರಕರಣದ ಆರೋಪಿಯ ಬಂಧನ

Spread the love

 ಚಿನ್ನಾಭರಣ ಕಳವು ಪ್ರಕರಣದ ಆರೋಪಿಯ ಬಂಧನ

ಮಂಗಳೂರು : ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವರದಿಯಾದ ಮನೆ ಕಳವು ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಬಂಧಿಸಿ ಕಳವು ಮಾಡಿದ ಸುಮಾರು 120 ಗ್ರಾಂ ತೂಕದ ಸುಮಾರು 2,20,000/-ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತನ್ನನ್ನು ಮೈಸೂರು ಕುಂಬಾರ ಕೊಪ್ಪಲ ನಿವಾಸಿ ನವೀನ್ ಕುಮಾರ್ (29) ಎಂದು ಗುರುತಿಸಲಾಗಿದ್ದು ಪ್ರಸ್ತುತ ಮಂಗಳೂರಿನ ಫಳ್ನೀರ್ ಬಳಿ ವಾಸಿಸುತ್ತಿದ್ದನು.

ಪಿರ್ಯಾದಿದಾರರು ದಿನಾಂಕ 24-08-2018 ರಂದು ರಾತ್ರಿ 9-15 ಗಂಟೆಗೆ ಮನೆಗೆ ಬೀಗ ಹಾಕಿ ಬೆಂಗಳೂರಿನಲ್ಲಿರುವ ಮಗ ಮತ್ತು ಹೆಂಡತಿಯನ್ನು ಕಾಣಲು ಹೋಗಿದ್ದು, ಬಳಿಕ ದಿನಾಂಕ 12-09-2018 ರಂದು ಮದ್ಯಾಹ್ನ 2-30 ಗಂಟೆಗೆ ಮಂಗಳೂರಿಗೆ ಬಂದಿದ್ದು ಈ ನಡುವೆ ಪಿರ್ಯಾದಿದಾರರ ಮನೆಯ ಗೋಡ್ರೇಜ್ ನ ಲಾಕರ್ ನಲ್ಲಿರಿಸಿದ್ದ ಸುಮಾರು 120 ಗ್ರಾಂ ವಿವಿಧ ಮಾದರಿಯ ಚಿನ್ನಾಭರಣ ಮತ್ತು ವಿಜಯ ಬ್ಯಾಂಕ್ ಚೆಕ್ ಬುಕ್ ಕಳವಾಗಿರುತ್ತದೆ.ಈ ಬಗ್ಗೆಪಿರ್ಯಾದಿದಾರಾದ ಮೋಹನ್ .ಡಿ ಭಂಡಾರಿ ರವರು ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಈತನು ಮೂಲತ ಮೈಸೂರು ಜಿಲ್ಲೆಯವನಾಗಿರುತ್ತಾನೆ. ಈತನ ಮೇಲೆ ಈಗಾಗಲೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ ದಾಖಲಾಗಿದ್ದು ಈ ಪ್ರಕರಣದಲ್ಲಿ ಈತನು ದಸ್ತಗಿರಿಯಾಗಿ ಜೈಲಿನಲ್ಲಿದ್ದು ನಂತರದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿದೆ.

ಈ ಪ್ರಕರಣದ ಆರೋಪಿ ನವೀನ್ ಎಂಬಾತನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಕೆ.ಎಂ. ಶರೀಫ್ ದಸ್ತಗಿರಿ ಮಾಡಿ ಠಾಣೆಯಲ್ಲಿ ದಾಖಲಾದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 2,20,000/-ಮೌಲ್ಯದ 120 ಗ್ರಾಂ ಚಿನ್ನಾಭರಣವನ್ನು ಸ್ವಾಧೀನಪಡಿಸಿಕೊಳ್ಳಲಾಯಿತು.

ಪೊಲೀಸ್ ಆಯುಕ್ತರಾದ ಟಿ.ಆರ್ ಸುರೇಶ್ ,ಐಪಿಎಸ್., ಉಪ ಪೊಲೀಸ್ ಆಯುಕ್ತರಾದ (ಕಾನೂನು ಮತ್ತು ಸುವ್ಯವಸ್ಥೆ) ಹನುಮಂತರಾಯ, ಉಪ-ಪೊಲೀಸ್ ಆಯುಕ್ತರಾದ (ಅಪರಾಧ ಮತ್ತು ಸಂಚಾರ ) ಉಮಾಪ್ರಶಾಂತ್, ಹಾಗೂ ಮಂಗಳೂರು ಸೆಂಟ್ರಲ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಭಾಸ್ಕರ್ ವಿ.ಬಿ ಇವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಕೆ.ಎಂ. ಶರೀಫ್ ರವರು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪನಿರೀಕ್ಷಕರಾದ ಮಂಜುಳಾ.ಎಲ್ ಮತ್ತು ಕಾನೂನು ಸುವ್ಯವಸ್ಥೆಯ ಪೊಲೀಸ್ ಉಪನಿರೀಕ್ಷಕರಾದ ರಾಜೇಂದ್ರ ಹಾಗೂ ಮಂಗಳೂರು ದಕ್ಷಿಣ ಠಾಣೆಯ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯವರ ಸಹಾಯದಿಂದ ಆರೋಪಿಯನ್ನು ದಸ್ತಗಿರಿ ಮಾಡಿ ಆರೋಪಿಯು ಕಳವು ಮಾಡಿದ ಚಿನ್ನಾಭರಣಗಳನ್ನು ಸ್ವಾಧೀನ ಪಡಿಸಿಕೊಂಡಿರುತ್ತಾರೆ.


Spread the love