ಜನಧ್ವನಿ; ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಭೂಸ್ವಾಧೀನ ಕಾಯ್ದೆ, ಕಾರ್ಮಿಕರ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜನಧ್ವನಿ ಅಭಿಯಾನದ ಮೂಲಕ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಭವನದಿಂದ ತಾಲೂಕು ಕಚೇರಿಯ ವರೆಗೆ ಮೆರೆವಣಿಗೆಯ ಮೂಲಕ ತೆರಳಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಲೆ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕರ್ನಾಟಕದ ಬಿಜೆಪಿ ಸರ್ಕಾರವು ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಸುಗ್ರಿವಾಜ್ಞೇ ಮೂಲಕ ಜಾರಿಗೆ ಗೊಳಿಸಿದೆ. ಇಡೀ ಮನುಕುಲವನ್ನೇ ಆತಂಕಕ್ಕೀಡು ಮಾಡಿರುವ ಕೋವಿಡ್-19 ವೈರಾಣು ನಿಯಂತ್ರಣ ಕಾರ್ಯಕ್ರಮದಲ್ಲಿ ವ್ಯಾಪಕವಾದ ಭ್ರಷ್ಟಾಚಾರ ನಡೆಸಿದೆ. ಅಲ್ಲದೆ ರಾಜ್ಯದ ಬಹುಭಾಗವನ್ನು ಭಾಧಿಸುತ್ತಿರುವ ಅತಿವೃಷ್ಟಿಗೆ ಪರಿಹಾರ ಒದಗಿಸುವಲ್ಲಿ ಕೂಡ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು ಆರ್ ಸಭಾಪತಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹರೀಶ್ ಕಿಣಿ, ಕಾಂಗ್ರೆಸ್ ನಾಯಕರಾದ ವೆರೋನಿಕಾ ಕರ್ನೆಲಿಯೋ, ಯತೀಶ್ ಕರ್ಕೆರಾ, ಜನಾರ್ಧನ ಭಂಡಾರ್ಕರ್, ಡಾ ಸುನೀತಾ ಶೆಟ್ಟಿ, ರೋಶನಿ ಒಲಿವರ್, ಹಬೀಬ್ ಆಲಿ, ಪ್ರಶಾಂತ್ ಪೂಜಾರಿ, ಭಾಸ್ಕರ್ ರಾವ್ ಕಿದಿಯೂರು, ನರಸಿಂಹ ಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು