Home Mangalorean News Kannada News ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

Spread the love

ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಮಂಗಳೂರು: ಕರ್ನಾಟಕ ಸರಕಾರದ ಸಾರಿಗೆ ಆಯುಕ್ತರಾಗಿ ಭಡ್ತಿ ಪಡೆದು ವರ್ಗಾವಣೆಗೊಂಡ ದಕ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರ ಜತೆಗಿನ ಒಡನಾಟದ ಕುರಿತು ಅನುಭವ ಹಂಚಿಕೊಂಡ ಅಪರ ಜಿಲ್ಲಾಧಿಕಾರಿ ಕುಮಾರ್ ಅವರು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಏಕೈಕ ಜಿಲ್ಲಾಧಿಕಾರಿ ಇಬ್ರಾಹಿಂ ಆಗಿದ್ದು, 2 ವರ್ಷ 7 ತಿಂಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜನ ಸಾಮಾನ್ಯರ ಮನಗೆದ್ದ ಅವರ ಆಡಳಿತ ವೈಖರಿ, ಕ್ರಿಯಾಶೀಲತೆ, ಯುವ ಅಧಿಕಾರಿಗಳಿಗೆ ಸ್ಪೂರ್ತಿದಾಯಕ. ಯುವ ಅಧಿಕಾರಿಯಂತೆ ಕರ್ತವ್ಯ ನಿರವಹಿಸುವ ಮೂಲಕ ಹೃದಯವಂತಿಕೆ ಹಾಗೂ ಮಾನವೀಯತೆ ಇರುವ ಅಧಿಕಾರಿ ಎನ್ನುವುದನ್ನು ಸಾಬಿತು ಪಡಿಸಿದ್ದಾರೆ ಎಂದರು.

image002dc-ibrahim-farewell-programme-20160730-002

ಜಿಲ್ಲಾಡಳಿತದ ಗೌರವನ್ನು ಸ್ವೀಕರಿಸಿ ಮಾತನಾಡಿದ ಇಬ್ರಾಹಿಂ ಅವರು ಜನರ ಆಶೋತ್ತರಗಳಿಗೆ ತಕ್ಕಂತೆ ಕಾನೂನು ಜಾರಿಗೊಳಿಸಿದರೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನರ ನಡುವೆ ಉತ್ತಮ ಭಾಂಧವ್ಯ ಬೆಳೆಯಲು ಸಾಧ್ಯವಾಗುತ್ತದೆ. ಅದನ್ನು ನಾನು ಮಾಧ್ಯಮದ ಸಹಕಾರದೊಂದಿಗೆ ಮಾಡುವ ಪ್ರಯತ್ನ ಮಾಡಿದ್ದು, ಸರಕಾರದ ವಿವಿಧ ಸೌಲಭ್ಯಗಳು, ಕಾನೂನುಗಳು ಹಾಗೂ ಹಕ್ಕುಗಳ ಒಳ ತಿರಳನ್ನು ಮಾಧ್ಯಮದ ಮೂಲಕ ಜನರಿಗೆ ತಿಳಿಹೇಳುವ ಕೆಲಸ ಮಾಡಿದ್ದು, ಕಾನೂನುಗಳು ಜನಪರವಾಗಿರಬೇಕೆಂಬ ಆಶಯದೊಂದಿಗೆ ಕರ್ತವ್ಯ ನಿರ್ವಹಿಸಿದ್ದೇನೆ ಎಂದರು.

ಮಂಗಳೂರು ಮಹಾನಗರಪಾಲಿಕೆಗೆ ಸರಕಾರದಿಂದ ಸಾಕಷ್ಟು ಅನುದಾನ ಬರುತ್ತಿದ್ದರೂ ಬದಲಾವಣೆಗೆ ಸಾಧ್ಯವಾಗಿಲ್ಲ. ಅಲ್ಲದೆ ಅಧಿಕಾರಿಗಳ ಕೊರತೆ ಜಿಲ್ಲೆಯ ಅಭಿವೃದ್ಧಿಗೆ ಭಾಧಕವಾಗುತ್ತಿದ್ದು, ದಕ ಜಿಲ್ಲೆಗೆ ಮರಳು ನೀತಿ ರೂಪಿಸಬೇಕೆಂಬ ಕನಸು ನನಸಾಗಿಸಲು ಸಾಧ್ಯವಾಗಿಲ್ಲ ಎಂಬ ವಿಷಾದ ತನಗಿದೆ ಎಂದರು.

ನಿರ್ಗಮನದ ಕೊನೆಯ ಕ್ಷಣದಲ್ಲಿ ಜಿಲ್ಲಾಧಿಕಾರಿಯಾಗಿದ್ದ ಇಬ್ರಾಹಿಂ ಮಂಗಳೂರು ಮಹಾನಗರಪಾಲಿಕೆಯಲ್ಲಿ ದಿನಗೂಲಿ ನೌಕರರಾಗಿದ್ದ 79 ಮಂದಿ ಪೌರಕಾರ್ಮಿಕರ ನೇಮಕಾಗಿ ಆದೇಶ ಮಾಡುವ ಮೂಲ ದಲಿತ ಸಮುದಾಯದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್, ನಗರ ಪೋಲಿಸ್ ಆಯುಕ್ತ ಚಂದ್ರಶೇಖರ್, ಪೋಲಿಸ್ ವರಿಷ್ಠಾಧಿಕಾರಿ ಗುಲಾಬ್ ರಾವ್ ಬೋರಸೆ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ರೀ ವಿದ್ಯಾ ಜಿಲ್ಲಾಧಿಕಾರಿ ಇಬ್ರಾಹಿಂ ಅವರನ್ನು ಅಭಿನಂದಿಸಿ ಮಾತನಾಡಿದರು.

ವೇದಿಕೆಯಲ್ಲಿ ಡಿಸಿಪಿ ಶಾಂತರಾಜು, ಮನಾಪಾ ಆಯುಕ್ತ ಮಹಮ್ಮದ್ ನಝೀರ್, ಪುತ್ತೂರು ಸಹಾಯಕ ಆಯುಕ್ತ ಡಾ ರಾಜೇಂದ್ರ, ಇನ್ನಿತರರು ಉಪಸ್ಥಿತರಿದ್ದರು.


Spread the love

Exit mobile version