ಜಿಲ್ಲಾಧಿಕಾರಿ ಕಚೇರಿಯಲ್ಲಿ ಮರಳು ಲಭ್ಯತೆ ಬಗ್ಗೆ ಕಂಟ್ರೋಲ್ ರೂಂ
ಉಡುಪಿ : 2018-19 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ಬ್ರಹ್ಮಾವರ ಹಾಗೂ ಉಡುಪಿ ತಾಲ್ಲೂಕು ವ್ಯಾಪ್ತಿಯಲ್ಲಿನ ಮರಳು ದಿಬ್ಬಗಳನ್ನು ತೆರವುಗೊಳಿಸಲು ಮರಳು ಪರವಾನಿಗೆಯನ್ನು ನೀಡಿದ್ದು, ಮರಳು ದಿಬ್ಬಗಳನ್ನು ತೆರವುಗೊಳಿಸಿ ಜಿಲ್ಲೆಯೊಳಗೆ ಸ್ಥಳೀಯ ಬಳಕೆಗೆ ವಿತರಿಸಲಾಗುತ್ತಿದೆ.
ಸಾರ್ವಜನಿಕರಿಗೆ ಮರಳು ದೊರೆಯುವಂತೆ ಮಾಡಲು ಜಿಲ್ಲಾಡಳಿತವು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಮರಳು ಪಡೆಯಬೇಕಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿನ ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್) ದೂ.ಸಂ. 0820-2574802 ಗೆ ಕರೆಮಾಡಿ ಮರಳಿನ ಲಭ್ಯತೆ ಬಗ್ಗೆ ಮಾಹಿತಿ ಪಡೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ /ಅನುಷ್ಠಾನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.