ಜಿಲ್ಲಾ ಗಡಿಗಳ ಸೀಲ್ ಡೌನ್; ಉಡುಪಿ ಜಿಲ್ಲೆಯ ಚರ್ಚುಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದು
ಉಡುಪಿ: ಜಿಲ್ಲೆಯಲ್ಲಿ ಜುಲೈ 15 ರಾತ್ರಿ 8 ಗಂಟೆಯಿಂದ ಜುಲೈ 29 ವರೆಗೆ ಕೊರೋನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡುವ ಆದೇಶವನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಎಲ್ಲಾ ರೀತಿಯ ಸಾಮೂಹಿಕ ಪೂಜೆ, ಧಾರ್ಮಿಕ ಆಚರಣೆಗಳನ್ನು ರದ್ದುಗೊಳಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ| ಜೆರಾಲ್ಡ್ ಐಸಾಕ್ ಲೋಬೊ ಆದೇಶಿಸಿದ್ದಾರೆ
ಸೀಲ್ ಡೌನ್ ವೇಳೆ ಜಿಲ್ಲೆಯ ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಮಾತ್ರ ಅವಕಾಶವಿದೆ. ಈ ಸಮಯದಲ್ಲಿ ಒಮ್ಮೆಗೆ ಅರ್ಚಕ/ ಮೌಲ್ವಿ/ ಧರ್ಮಗುರು/ ಭಕ್ತಾಧಿಗಳು ಸೇರಿ 20 ಜನರಿಗಿಂತ ಜಾಸ್ತಿ ಇರತಕ್ಕದಲ್ಲ. ಯಾವುದೇ ವಿಶೇಷ ಪೂಜೆಗಳು/ ಧಾರ್ಮಿಕ ಆಚರಣೆಗಳು ಇರುವುದಿಲ್ಲ ಎಂಬ ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಎಲ್ಲಾ ರೀತಿಯ ಸಾಮೂಹಿಕ ಪೂಜೆ, ಧಾರ್ಮಿಕ ಆಚರಣೆಗಳನ್ನು ರದ್ದುಗೊಳಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ| ಜೆರಾಲ್ಡ್ ಐಸಾಕ್ ಲೋಬೊ ಆದೇಶಿಸಿದ್ದಾರೆ. ಈ ಆದೇಶವು ಜಿಲ್ಲಾಡಳಿತದ ಮುಂದಿನ ಆದೇಶ ಬರುವ ತನಕ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.