Home Mangalorean News Kannada News ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ಆರಂಭ

ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ಆರಂಭ

Spread the love

ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ಆರಂಭ

ಉಡುಪಿ: ಚುನಾವಣ ಆಯೋಗದ ನಿರ್ದೇಶನದಂತೆ, ಮುಂಬರುವ ಸಾರ್ವತ್ರಿಕ ಚುನಾವಣೆ 2019 ಗೆ ಸಂಬಂದಿಸಿದಂತೆ ಮತದಾರರ ಪಟ್ಟಿಗೆ ಸಂಬಂದಿಸಿದ ಮಾಹಿತಿಗಳನ್ನು ಉಡುಪಿ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರು ಪಡೆಯಲು ಅನುಕೂಲವಾಗುವಂತೆ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾರಂಭಿಸಿರುವ, ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ( ವೋಟರ್ ಹೆಲ್ಪ್ ಲೈನ್) ವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಬುಧವಾರ ಉದ್ಘಾಟಿಸಿದರು.

ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1950 ಗೆ ಮೂಲಕ ಉಚಿತ ಕರೆ ಮಾಡುವ ಮೂಲಕ ಮತದಾರರ ಪಟ್ಟಿಗೆ ಸಂಬಂದಿಸಿದ ಮಾಹಿತಿಗಳನ್ನು ಪಡೆಯಬಹುದಾಗಿದೆ.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.


Spread the love

Exit mobile version