Home Mangalorean News Kannada News ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳ, ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳ, ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Spread the love

ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳ, ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ

ಬಂಟ್ವಾಳ ತಾಲ್ಲೂಕಿನ ಕಸಬಾ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೋರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಚಿವರು ಹಾಗೂ ಸಂಸದರು ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ತುರ್ತು ಸಭೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್ ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯ 213 ಮನೆಗಳಲ್ಲಿ ಪ್ರತಿನಿತ್ಯ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳು ಭೇಟಿಕೊಟ್ಟು ವರದಿ ನೀಡಬೇಕು. ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ದ.ಕ. ಜಿಲ್ಲೆಯಲ್ಲಿ ಒಟ್ಟು 19 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 12 ಪ್ರಕರಣಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ. ಇಬ್ಬರು ಸಾವನ್ನಪ್ಪಿದ್ದು, ಉಳಿದ ಪ್ರಕರಣಗಳಲ್ಲಿ ನಿಗಾವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.


Spread the love

Exit mobile version