Home Mangalorean News Kannada News ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ : ಉಲ್ಲಂಘಿಸಿದಲ್ಲಿ ಕಠಿಣ ಕ್ರಮ – ಜಿಲ್ಲಾಧಿಕಾರಿ...

ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ : ಉಲ್ಲಂಘಿಸಿದಲ್ಲಿ ಕಠಿಣ ಕ್ರಮ – ಜಿಲ್ಲಾಧಿಕಾರಿ ಜಿ.ಜಗದೀಶ್

Spread the love

ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ : ಉಲ್ಲಂಘಿಸಿದಲ್ಲಿ ಕಠಿಣ ಕ್ರಮ – ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು.
ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬAಧಿತ ಕಾಯಿಲೆಗಳು ಬರಬಹುದು.

ಕೋವಿಡ್-19 ಸೋಂಕಿತರು , ಜಗಿಯುವ ಪಾನ್‌ಮಸಾಲ, ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಕೋವಿಡ್-19 ವೈರಸ್ ಹರಡುವ ಭೀತಿ ಇರುತ್ತದೆ.

ಆದ್ದರಿಂದ ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಉತ್ಪನ್ನಗಳನ್ನು, “ಉಡುಪಿ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ”. ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ-1897, ವಿಪತ್ತು ನಿರ್ವಹಣಾ ಕಾಯಿದೆ-2005, ಐಪಿಸಿ-188,268,269 ಮತ್ತು 270 ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬAಧಿಸಿದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.


Spread the love

Exit mobile version