ಜುಲೈ 29: ಉಡುಪಿ ಜಿಲ್ಲೆಯಲ್ಲಿ ಮತ್ತೆ 173 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ, ಒಟ್ಟು 173 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3895 ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 824 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಬುಧವಾರ 487 ವರದಿಗಳು ನೆಗೆಟಿವ್ ಬಂದಿದ್ದು, 173 ಪಾಸಿಟಿವ್ ಬಂದಿವೆ. 835 ವರದಿಗಳು ಬರುವುದು ಬಾಕಿ ಇದೆ.
ಬುಧವಾರ ಸೋಂಕಿನ ಲಕ್ಷಣಗಳು ಕಂಡುಬಂದ 42 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2323 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1547 ಸಕ್ರಿಯ ಪ್ರಕರಣಗಳು ಬಾಕಿ ಇವೆ.