ಜು.8ರಂದು ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Spread the love

ಜು.8ರಂದು ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ
 

ಮಂಗಳೂರು: ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.8ರಂದು ರಜೆ ಘೋಷಿಸಲಾಗಿದೆ.

ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮಂಗಳೂರು ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮಂಗಳೂರು ತಹಶೀಲ್ದಾರ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.


Spread the love