Home Mangalorean News Kannada News ಜೂನ್ 25ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ

ಜೂನ್ 25ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ

Spread the love

ಜೂನ್ 25ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4ರವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು.

ದ್ವಿತೀಯ ಪಿಯು ಇಂಗ್ಲೀಷ್ ಪರೀಕ್ಷೆ ಜೂನ್ 18 ರಂದು ನಡೆಯಲಿದೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು 2879 ಪರೀಕ್ಷಾ ಕೇಂದ್ರಗಳಲ್ಲಿ 43720 ಕೊಠಡಿಗಳನ್ನು ಬಳಸಲಾಗುತ್ತಿದೆ. ಪ್ರತಿ ಕೊಠಡಿಯಲ್ಲಿ ಅಗತ್ಯ ಶಾರೀರಿಕ ಅಂತರ ಕಾಯ್ದುಕೊಂಡು ಆಸನದ ವ್ಯವಸ್ಥೆ ಮಾಡಲಾಗುವುದು ಎಂದರು. 848146 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.

ಭಾರತ್ ಸ್ಕೌಟ್ಸ್ ನವರು ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ನೀಡಲಿದ್ದು, ರಾಮಕೃಷ್ಣ ಮಿಷನ್ ವತಿಯಿಂದ 2 ಲಕ್ಷ ಮಾಸ್ಕ್ ನೀಡಲಿದ್ದಾರೆ. ಎಲ್ಲಾ ಕೇಂದ್ರಗಳು ಸ್ಯಾನಿಟೈಸರ್ ಬಳಸಲಾಗುವುದು ಎಂದರು.

ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ಶಾಲೆಗಳನ್ನು ಕ್ವಾರಂಟೈನ್ ಮಾಡಿರುವುದರಿಂದ ಅಂತಹ ಪರೀಕ್ಷ ಕೇಂದ್ರಗಳ ವಿದ್ಯಾರ್ಥಿಗಳಿಗೆ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು.


Spread the love

Exit mobile version