ಮ0ಗಳೂರು: ಕರಾವಳಿ ಜಿಲ್ಲೆ ದ.ಕ.ಜಿಲ್ಲೆಯಾದ್ಯಂತ ಪ್ರಸ್ತುತ ಮಳೆಯಾಗುತ್ತಿದ್ದು, ಈ ಅವಧಿಯಲ್ಲಿ ಕಳೆದ ವರ್ಷಗಳಲ್ಲಿ ಉಂಟಾಗಿದ್ದ ಮಲೇರಿಯಾ, ಡೆಂಗ್ಯೂ ಮಾರಕ ರೋಗಗಳು ಈ ವರ್ಷ ಮರುಕಳಿಸದಂತೆ ಮುಂಜಾಗ್ರತಾ ಕ್ರಮವಾಗಿ ಜನರಲ್ಲಿ ಜಾಗೃತಿ ಉಂಟುಮಾಡಲು ಜೂನ್ 16ರಿಂದ 22ವರೆಗೆ ಜಿಲ್ಲೆಯಾದ್ಯಂತ ವಿಶೇಷ ಸ್ವಚ್ಚತಾ ಸಪ್ತಾಹವನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಹಾಗೂ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ.ಶ್ರೀ ವಿದ್ಯಾ ಅವರು ತಿಳಿಸಿದ್ದಾರೆ.
ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಈ ಸಂಬಂದ ಸಭೆಯಲ್ಲಿ ಈ ವಿಷಯ ತಿಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳು, ಮಂಗಳೂರು ಮಹಾನಗರ ಪಾಲಿಕೆ, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಸ್ವಯಂ ಸೇವಾ ಸಂಸ್ಥೆಗೂ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವಿಶೇಷ ಸ್ವಚ್ಚತಾ ಸಪ್ತಾಹ ಯಶಸ್ವಿಯಾಗುವಂತೆ ಕರೆನೀಡಿದರು.
ವಿಶೇಷ ಸ್ವಚ್ಚತಾ ಸಪ್ತಾಹದ ಅಂಗವಾಗಿ ಜೂನ್16ರಂದು ಕೊಳಚೆ ಪ್ರದೇಶಗಳಲ್ಲಿ , 17ರಂದು ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ, 18ರಂದು ಶಿಕ್ಷಣ ಸಂಸ್ಥೆಗಳು ಮತ್ತು ಹೊಟೇಲುಗಳಲ್ಲಿ, 19ರಂದು ಸರಕಾರಿ ಕಛೇರಿಗಳಲ್ಲಿ, 20ರಂದು ಸಾರ್ವಜನಿಕ ಪ್ರದೇಶಗಳಲ್ಲಿ, 21ರಂದು ಆಸ್ಪತ್ರೆಗಳಲ್ಲಿ, ಮತ್ತು 22ರಂದು ಕಾರ್ಕಾನೆಗಳ ಪ್ರದೇಶದಲ್ಲಿ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ರಾಮಕೃಷ್ಣ ರಾವ್ ಸಭೆಯಲ್ಲಿ ತಿಳಿಸಿದರು. ಈ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ವಿನಂತಿಸಿದ್ದಾರೆ.
ಜೂ 16 ರಿಂದ 22ವರೆಗೆ ಜಿಲ್ಲೆಯಲ್ಲಿ ವಿಶೇಷ ಸ್ವಚ್ಚತಾ ಸಪ್ತಾಹ-ಎ.ಬಿ.ಇಬ್ರಾಹಿಂ
Spread the love
Spread the love
Dear DC Sir, Kindly see the both sides of Mangalore Bangalore National Highway from Farangipet to B C Road. It is best example for Swatch Bharath.