ಜೈಲ್ ಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವತಿಯ ಸೆರೆ
ಮಂಗಳೂರು: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಗೆ ಭೇಟಿ ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವತಿಯೊಬ್ಬಾಕೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಬರ್ಕೆ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.
ದಿನಾಂಕ: 11-10-2018 ರಂದು ಮಂಗಳೂರು ಜೈಲ್ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಖೈದಿಗಳಿಗೆ ಭೇಟಿ ನೀಡುವ ಸಮಯದಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುವಾದ ಗಾಂಜಾವನ್ನು ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರಾಗೃಹದಲ್ಲಿ ವಿಚಾರಣಾಧೀಣ ಖೈದಿಯಾಗಿದ್ದ ಮುಸ್ತಾಫ ಎಂಬಾತನಿಗೆ ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಯುವತಿಯೊಬ್ಬಳನ್ನು ವಶಕ್ಕೆ ಪಡೆದುಕೊಂಡು ಆಕೆಯಿಂದ 20 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಯುವತಿಗೆ ಗಾಂಜಾವನ್ನು ನೀಡಿದ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ತನಿಖೆ ಮುಂದುವರಿಯುವುದು.
ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಮತ್ತು ಬರ್ಕೆ ಪೊಲೀಸ್ ಠಾಣಾ ಪಿಎಸ್ಐ ಶೋಭಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
.