Home Mangalorean News Kannada News ಜ.17: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

ಜ.17: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

Spread the love

ಜ.17: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

ಮಂಗಳೂರು: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್ ಜ.17ರಿಂದ ದ.ಕ.ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಜ.18ರ ಪೂ.11ರಿಂದ ಮಧ್ಯಾಹ್ನ 1ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಹಾಲಿ ಇರುವ ಯೋಜನೆಗಳ ಮಾರ್ಪಾಡಿನ ಅವಶ್ಯಕತೆ ಇದ್ದಲ್ಲಿ ಹಾಗೂ ನೂತನ ಯೋಜನೆಗಳನ್ನು ಪ್ರಸ್ತಾಪಿಸಿ ಚರ್ಚಿಸುವ ಕುರಿತು ಅಲ್ಪಸಂಖ್ಯಾತರ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಅಪರಾಹ್ನ 3ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


Spread the love

Exit mobile version