ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ: ಶೋಭಾ ಕರಂದ್ಲಾಜೆ
ಬೆಂಗಳೂರು: ಟಿಪ್ಪು ಜಂಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿರುವ ಸಂಸದೆ ಶೋಭಾ ಕರಂದ್ಲಾಜೆ ಅವರು, ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಂತೆ ತಿಳಿಸಿದ್ದಾರೆ. ಜತೆಗೆ, ಟಿಪ್ಪು ಕನ್ನಡ ಹಾಗೂ ಹಿಂದೂ ವಿರೋಧಿ ಎಂದು ಹೇಳಿದ್ದಾರೆ.
Congress Govt is hell bent on organising Tippu Jayanti.Have informed both Udupi & Chicmagalur DC's to not put my name on the invite.
— Shobha Karandlaje (@ShobhaBJP) October 20, 2017
ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಸಂಘಟಿಸಲು ಉತ್ಸುಕವಾಗಿದೆ. ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಹಾಕಬಾರದು ಎಂದು ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲಾಧಿಕಾರಿಗಳಿಗೆ ತಿಳಿಸಿರುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿದ್ದಾರೆ.
ಟಿಪ್ಪು ಕನ್ನಡ ವಿರೋಧಿ ಮತ್ತು ಹಿಂದೂ ವಿರೋಧಿಯಾಗಿದ್ದರು. ಎಲ್ಲಾ ಕನ್ನಡಿಗರು ಟಿಪ್ಪು ಜಯಂತಿಯನ್ನು ವಿರೋಧಿಸುತ್ತಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸರ್ಕಾರ ಟಿಪ್ಪು ಜಯಂತಿ ಆಚರಿಸಬಾರದು ಎಂದಿರುವ ಶೋಭಾ ಕರಂದ್ಲಾಜೆ ಅವರು, ಸರ್ಕಾರ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ.